ದೇಶಸುದ್ದಿ

ಭಾರತ-ಚೀನಾ ಗಡಿ ಬಿಕ್ಕಟ್ಟು; ಕಮಾಂಡರ್​​ಗಳಿಂದ 13ನೇ ಸುತ್ತಿನ ಮಾತುಕತೆ, ಸಮಸ್ಯೆ ಇತ್ಯರ್ಥಕ್ಕೆ ಒತ್ತು

ನವ ದೆಹಲಿ (ಅಕ್ಟೋಬರ್​ 11); ಪೂರ್ವ ಲಡಾಖ್ (Ladakh) ವಲಯದಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟು ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಚೀನಾ ಸೈನಿಕರು ಈ ಭಾಗದಲ್ಲಿ ಆಗಿಂದಾಗ್ಗೆ ಗಡಿ ಉಲ್ಲಂಘನೆ ನಡೆಸುತ್ತಲೇ ಇದ್ದಾರೆ. ಕಳೆದ ವಾರ ಸಹ ಗಡಿ ಉಲ್ಲಂಘಿಸಿದ ಅನೇಕ ಚೀನಾ (China) ಸೈನಿಕರನ್ನು ಭಾರತ ಸೇನೆ (Indian Army) ವಶಕ್ಕೆ ಪಡೆದಿತ್ತು. ಹೀಗಾಗಿ ಭಾರತ ಮತ್ತು ಚೀನಾ ಮಿಲಿಟರಿ ಕಮಾಂಡರ್​ಗಳ ಮಟ್ಟದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಸತತ ಮಾತುಕತೆ ನಡೆಯುತ್ತಲೇ ಇದೆ.

ಭಾನುವಾರ ಸಹ ಮೊಲ್ಡೊದಲ್ಲಿ ಭಾರತ ಮತ್ತು ಚೀನಾ ನಡುವೆ ಹದಿಮೂರನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗಳು ಸುಮಾರು ಎಂಟೂವರೆ ಗಂಟೆಗಳ ಕಾಲ ನಡೆದಿದೆ. ಪೂರ್ವ ಲಡಾಖ್ ವಲಯದಲ್ಲಿ ಉಭಯ ದೇಶಗಳ ಸೇನೆಗಳ ನಡುವಿನ ಮಿಲಿಟರಿ ಬಿಕ್ಕಟ್ಟನ್ನು ಬಗೆಹರಿಸುವ ಸಲುವಾಗಿ ಈ ಸಭೆಯನ್ನು ನಡೆಸಲಾಗಿದೆ ಎಂದು ಸೇನಾ ಮೂಲಗಳನ್ನು ಉಲ್ಲೇಖಿಸಿ ANI ವರದಿ ಮಾಡಿದೆ.

ಭಾನುವಾರ ಸಂಜೆ 7 ಗಂಟೆಗೆ ಮಾತುಕತೆ ಮುಕ್ತಾಯವಾದ ಸಭೆಯಲ್ಲಿ ಪೂರ್ವ ಲಡಾಖ್‌ನಲ್ಲಿ ಎರಡೂ ದೇಶಗಳ ಘರ್ಷಣೆಗೆ ಕಾರಣವಾದ ಪ್ರದೇಶಗಳಲ್ಲಿ ಸೇನೆ ಹಿಂದೆ ಸರಿಯುವ ಬಗ್ಗೆ ಹಾಗೂ ಶಾಂತಿಯನ್ನು ಕಾಪಾಡುವ ಬಗ್ಗೆ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗಳನ್ನು ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ಈ ಹಿಂದೆ ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button