ಸಿನಿಮಾ
ಖ್ಯಾತ ನಟಿ ಖುಷ್ಬೂಗೆ ಇಂದು 51 ನೇ ಹುಟ್ಟುಹಬ್ಬ
ಚೆನೈ: ಖ್ಯಾತ ಬಹುಭಾಷಾ ನಟಿ ಖುಷ್ಬೂ ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.
ಖಷ್ಬೂ 1980ರಲ್ಲಿ ತೆರೆಕಂಡ ‘ದಿ ಬರ್ನಿಂಗ್ ಟ್ರೈನ್’ ಎಂಬ ಹಿಂದಿ ಚಿತ್ರದ ಮೂಲಕ ಬಾಲನಟಿಯಾಗಿ ಸಿನಿಮಾ ಜಗತ್ತಿಗೆ ಕಾಲಿಟ್ಟರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಅವರು ಅದ್ಭುತವಾಗಿ ಅಭಿನಯಿಸಿದ್ದು, 1988ರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ‘ರಣಧೀರ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು.
ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಖುಷ್ಬೂ ಅಭಿನಯಿಸಿದ್ದಾರೆ. ಇಂದು ಅವರ ಹುಟ್ಟುಹಬ್ಬಕ್ಕೆ ಸಿನಿತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.