ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ!
ಬೆಂಗಳೂರು : ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಮಾಡಿದ ಸಾಮಾಜಿಕ ಕೆಲಸಗಳು ತುಂಬಾನೇ ದೊಡ್ಡದು. ಈಗ ಅವರ ಕುರಿತು ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದೆ. ಈ ಕಾರಣಕ್ಕೆ ಅಮಿತಾಭ್ ಬಚ್ಚನ್ ಕಾಲ್ಶೀಟ್ ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ ನಟಿಸಿದಂತೆ ಆಗಲಿದೆ.
ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್ಗಳನ್ನು ಒಳಗೊಂಡ ಮಿನಿ ಸಿರೀಸ್ಗಳನ್ನಾಗಿ ಮಾಡಲಾಗುತ್ತಿದೆ. ದೊಡ್ಡ ಮೊತ್ತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಹಾಗೂ ಸಂಸ್ಕೃತ ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ. ಏಳಕ್ಕೂ ಹೆಚ್ಚು ತಂಡಗಳಲ್ಲಿ, 300 ಅಧಿಕ ತಂತ್ರಜ್ಞರು ಈ ಮಿನಿ ಸೀರಿಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ.
ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರವನ್ನು ಮಾಡಲು ಚಿತ್ರತಂಡ ಈಗಾಗಲೇ ಅಪ್ರೋಚ್ ಮಾಡಲಾಗಿದೆ. ಅವರು ಕಥೆಯನ್ನು ಕೇಳಿದ್ದಾರೆ. ಆದರೆ, ಸದ್ಯ ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋ ಕಾರಣ ಗ್ರೀನ್ ಸಿಗ್ನಲ್ಗಾಗಿ ಕಾಯುತ್ತಿದ್ದೇವೆ’ ಎಂದು ಹಂಸಲೇಖ ಹೇಳಿದ್ದಾರೆ.