ಇತ್ತೀಚಿನ ಸುದ್ದಿಕ್ರೀಡೆಸುದ್ದಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ದೇಶದ 2ನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿ  ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರಿಂದ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. 2023 ರ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70 ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಶಮಿ ಅವರ  ಈ ಅಮೋಘ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿತ್ತು.

ಆದರೆ ನಿರ್ಣಾಯಕ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ವಿಶ್ವಕಪ್​ ಕಿರೀಟ ಮುಡಿಗೇರಿಸಿಕೊಳ್ಳುವ ಅವಕಾಶ ಭಾರತ ತಂಡ ಕೈ ತಪ್ಪಿಸಿಕೊಂಡಿತು. ಅತ್ತ ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ  ಶಮಿಯ ಸಾಧನೆಯನ್ನು ಪರಿಗಣಿಸಿ ಅರ್ಜುನ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ.

.

Related Articles

Leave a Reply

Your email address will not be published. Required fields are marked *

Back to top button