ಸುದ್ದಿ
ಅ.1 ರಿಂದ ತಿಮ್ಮಪ್ಪನ ದರ್ಶನಕ್ಕೆ ಕೊರೊನಾ ಲಸಿಕೆ ಕಡ್ಡಾಯ!
ತಿರುಪತಿ : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ಟಿಟಿಡಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಕೊವಿಡ್ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಟಿಟಿಡಿ ತಿಳಿಸಿದೆ.
ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಎರಡೂ ಡೋಸ್ ಲಸಿಕೆ ಅಥವಾ ಕೊರೊನಾ ನೆಗೆಟಿವ್ ವರದಿಯನ್ನು ನೀಡುವುದು ಕಡ್ಡಾಯವಾಗಿದ್ದು, ಅಕ್ಟೋಬರ್ 1ರಿಂದ ಈ ಹೊಸ ನಿಯಮ ಜಾರಿಯಾಗಲಿದೆ.