Karnataka Rains Today ಬೆಂಗಳೂರು(ಅ.12):ಮುಂಗಾರು (Monsoon)ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ (Javab)ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ(Karnataka) ಸಹ ಕಳೆದ 3 ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದೆ(Rainfall).
ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಅಧಿಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಇಂದಿನ ಹವಾಮಾನ ಹೇಗಿರಲಿದೆ?
ಇನ್ನು ರಾಜ್ಯದಲ್ಲಿ ಇಂದು ಮತ್ತೆ ಮುಂಗಾರು ಚುರುಕಾಗಲಿದ್ದು,ಧಾರಕಾರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಬೆಳಗಾವಿ,, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.