ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ!
ಕರ್ನಾಟಕದಲ್ಲಿ(Karnataka) ಸ್ವಲ್ಪ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ(Rain) ಮತ್ತೆ ತನ್ನ ಆರ್ಭಟ ತೋರಿಸಲು ಸಜ್ಜಾದಂತಿದೆ. ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಇನ್ನೂ 3 ದಿನ ಕರ್ನಾಟಕದ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲಿ(SIK) ಮಳೆಯಾಗಲಿದೆ. ಅದರಲ್ಲೂ ಇಂದು ಮತ್ತು ನಾಳೆ ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಸೇರಿದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು IMD ಹೇಳಿದೆ. ಅಂತೆಯೇ ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದಲ್ಲಿಯೂ ಮಳೆಯ(Rainfall) ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ.
ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಆದರೆ ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ.
ಪಂಜಾಬ್, ಮಧ್ಯಪ್ರದೇಶ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ವಾಯವ್ಯ ಮತ್ತು ಮಧ್ಯ ಭಾರತದ ಅನೇಕ ಭಾಗಗಳಲ್ಲಿ 3-5 ಡಿಗ್ರಿ ಸೆಲ್ಸಿಯಸ್‌ನಷ್ಟು ತಲಪುತ್ತಿದೆ. ಉತ್ತರ ಭಾರತದ ಉಳಿದ ಭಾಗಗಳಲ್ಲಿ ತಾಪಮಾನ ಸಾಮಾನ್ಯವಾಗಿದೆ.
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವುದರಿಂದ ಕರ್ನಾಟಕದಲ್ಲಿ ಪ್ರತಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಜನವರಿ 13ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಒಡಿಶಾ & ತೆಲಂಗಾಣದಲ್ಲಿ ಇಂದು ಮಳೆ
ಒಡಿಶಾ ಮತ್ತು ತೆಲಂಗಾಣದಲ್ಲಿ ಇಂದು ಸಹ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿದೆ. ಇಂದು ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉತ್ತರದ ರಾಜ್ಯಗಳಲ್ಲಿ ಹಳದಿ ಅಲರ್ಟ್
ಪಂಜಾಬ್‌ನ ಪಿಪಾ ರಂಗಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಭಾನುವಾರ ಡೈರಿಯ ಮೇಲ್ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದ್ದು, ಜನವರಿ 13 ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಇಂದು ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆಯಾಗಲಿದೆ.
ಪೂರ್ವ ಮತ್ತು ಮಧ್ಯ ಭಾರತದಲ್ಲಿ ಜನವರಿ 14ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ 4 ದಿನಗಳಲ್ಲಿ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಲಿದೆ.
ಪಂಜಾಬ್ ಮತ್ತು ಹರಿಯಾಣದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ. ಆದರೆ ಕನಿಷ್ಠ ತಾಪಮಾನವು ಎರಡು ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಮಾನ್ಯ ಮಿತಿಯನ್ನು ಮೀರಿದೆ.
ಈ ಭಾಗದಲ್ಲಿ ಮಳೆ
ಚಂಡೀಗಢ, ಕಪುರ್ತಲ, ಅಮೃತಸರ, ಲೂಧಿಯಾನ, ಪಟಿಯಾಲ, ಫಿರೋಜ್‌ಪುರ, ಬಟಿಂಡಾ, ಹೋಶಿಯಾರ್‌ಪುರ, ರೂಪನಗರ್, ಮೊಹಾಲಿ, ಗುರುದಾಸ್‌ಪುರ, ಅಂಬಾಲಾ, ಹಿಸಾರ್, ಪಂಚಕುಲ, ರೋಹ್ಟಕ್, ಗುರುಗ್ರಾಮ್, ಸಿರ್ಸಾ ಮತ್ತು ಯಮುನಾನಗರ ಭಾಗದಲ್ಲಿ ಮಳೆಯಾಗಲಿದೆ