ದೇಶಸುದ್ದಿ

ಉಡುಪಿ ಅಬಕಾರಿ ಜಿಲ್ಲಾಧಿಕಾರಿ ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ: 8.69 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ

ಉಡುಪಿ: ಉಡುಪಿ ಸಹಿತ ರಾಜ್ಯದ ವಿವಿಧಡೆ ಏಕಕಾಲದಲ್ಲಿ ಲೋಕಾಂ ಕ್ತ ದಾಳಿ ನಡೆದಿದೆ. ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಅವರ ಮನೆ ಹಾಗೂ ಸಂಬಂಧಿತ ಸ್ಥಳಗಳ ಮೇಲೆ ದಾಳಿ ನಡೆಸಿ 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿದೆ.

ಅಬಕಾರಿ ಡಿ.ಸಿ. ಗೆ ಸಂಬಂಧಿಸಿದ 15 ಕಡೆ ಮಾರ್ಚ್ 11 ಮತ್ತು 12ರಂದು ಎರಡು ದಿನ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

11 ನಿವೇಶನಗಳು, 6 ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಸೇರಿದಂತೆ 6,90,64,716 ರೂಪಾಯಿ ಮೌಲ್ಯದ ಸ್ಥಿರ ಆಸ್ತಿ ಪತ್ತೆಯಾಗಿದೆ. 3,95,941 ರೂಪಾಯಿ ನಗದು ಮತ್ತು 1,47,50,506 ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳು ಪತ್ತೆಯಾಗಿವೆ. ಜತೆಗೆ 17 ಲಕ್ಷ ರೂಪಾಯಿ ರೂಪಾಯಿ ಬೆಲೆ ಬಾಳುವ ವಾಹನಗಳು, 25.75 ಲಕ್ಷ ರೂ. ಬ್ಯಾಂಕ್ ಠೇವಣಿ, 72,68,554 ರೂಪಾಯಿ ಬೆಲೆಬಾಳುವ ಇತರೆ ವಸ್ತುಗಳು ಸೇರಿದಂತೆ ಒಟ್ಟು 2,66,90,001 ರೂಪಾಯಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.

ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾ‌ರ್ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.

ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️

Related Articles

Leave a Reply

Your email address will not be published. Required fields are marked *

Back to top button