ದೇಶ

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಎರಡನೇ ಬಾರಿಗೆ ಕೋವಿಡ್

ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. ಹೈದರಾಬಾದ್‌ನಲ್ಲಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಇಂದು ಕೋವಿಡ್-19 ಪಾಸಿಟಿವ್ ಆಗಿದ್ದು, ಒಂದು ವಾರ ಅವರು ಸ್ವಯಂ ಆಗಿ ಐಸೋಲೇಷನ್​ನಲ್ಲಿ ಇರಲಿದ್ದಾರೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆಗೆ ಒಳಪಡುವಂತೆ ಟ್ವೀಟ್​ ಮೂಲಕ ಸಲಹೆ ನೀಡಿದ್ದಾರೆ.

ಕೊರೊನಾ ಹಿನ್ನೆಲೆ ಬುಧವಾರ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 3,33,533 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಿನ್ನೆಗೆ ಹೋಲಿಸಿದ್ರೆ, ಸುಮಾರು 4,000 ಪ್ರಕರಣಗಳು ಕಡಿಮೆಯಾಗಿವೆ. 525 ಜನ ಸೋಂಕಿಗೆ ಬಲಿಯಾಗಿದ್ದು, 2,59,168 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205 ಇದೆ.

Related Articles

Leave a Reply

Your email address will not be published. Required fields are marked *

Back to top button