ಸುದ್ದಿ
ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು; ಇಡೀ ಕಾಲೇಜು ಸೀಲ್ ಡೌನ್
ಮಂಡ್ಯ: ಶಾಲಾ – ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕಾಲೇಜಿನ 412 ವಿದ್ಯಾರ್ಥಿನಿಯರ ಪೈಕಿ 28 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿತರಿಗೆ ನಾಗಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಧಿಕಾರಿಗಳು ಒಂದು ವಾರಗಳ ಕಾಲ ಕಾಲೇಜು ಸೀಲ್ ಡೌನ್ ಮಾಡಿದ್ದಾರೆ.