ರಾಜ್ಯಸುದ್ದಿ

ಪೆಟ್ರೋಲ್​ 12 ರೂ. ಡೀಸೆಲ್​ 17 ರೂ. ಇಳಿಕೆ: ಇಂದು ಸಂಜೆಯಿಂದಲೇ ಹೊಸ ದರ ಜಾರಿ..!

Petrol and Diesel Price Down: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಲೆಸ್ ಮೇಲಿನ ಅಬಕಾರಿ ಸುಂಕದಲ್ಲಿ (Central Govt slashes Excise Duty on Petrol and Diesel) ಭಾರೀ ಕಡಿತಗೊಳಿಸಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ 5 ರೂ ಕಡಿಮೆ ಆದರೆ, ಡೀಸೆಲ್ ಮೇಲಿನ ಸುಂಕದಲ್ಲಿ 10 ರೂ ಕಡಿತಗೊಳಿಸಿದೆ. ಇಂದು ಸಂಜೆಯಿಂದಲೇ ಈ ಹೊಸ ದರಗಳು ಜಾರಿಗೆ ಬರಲಿದೆ. ಕೇಂದ್ರ ಸರ್ಕಾರ ದೇಶದ ಜನತೆಗೆ ದೀಪಾವಳಿ ಗಿಫ್ಟ್ (Deepavali gift) ಆಗಿ ಪೆಟ್ರೋಲ್ ಬೆಲೆ ಇಳಿಕೆ ನೀಡಿದೆ. ಅದರ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ (Basavaraj Bommai led Karnataka Government) ನೇತೃತ್ವದ ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನ ತಲಾ 7 ರೂಗಳಷ್ಟು ಇಳಿಕೆ ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್​ ಅನ್ನು 107.64 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 104.50 ರೂ. ಗೆ ಮಾರಾಟಮಾಡಲಾಗುತ್ತಿದೆ. 

ಟ್ವೀಟ್​ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವತಃ ತಾವೇ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 95.50 ರೂಪಾಯಿಗೆ ಇಳಿಕೆಯಾಗಲಿದೆ. ಡೀಸೆಲ್ ಬೆಲೆ 81.50 ರೂಪಾಯಿಯ ಆಸುಪಾಸು ದರಕ್ಕೆ ಇಳಿಯುವ ನಿರೀಕ್ಷೆ ಇದೆ. “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 5 ರೂ ಕಡಿಮೆಗೊಳಿಸಿ ಜನರಿಗೆ ದೀಪಾವಳಿ ಉಡುಗೊರೆ ಕೊಟ್ಟಿದ್ದಾರೆ…. ಕರ್ನಾಟಕ ಸರ್ಕಅರ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.

ಈ ನಮ್ಮ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂ ಕೆಎಸ್​ಟಿಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯ ಸರ್ಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯ ಆಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ ಎಂದು” ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button