ಕಾಂಗ್ರೆಸ್ ಪಕ್ಷದಲ್ಲಿ ಇರೋದು ಒಂದೇ ಬಣ, ಅದು ಸೋನಿಯಾ ಗಾಂಧಿ ಬಣ
ಕಲಬುರಗಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ.ಇರೋದು ಒಂದೇ, ಅದು ಸೋನಿಯಾ ಗಾಂಧಿ ಬಣ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Shivakumar) ಹೇಳಿದರು.
ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಬಗ್ಗೆ ಬಿಜೆಪಿಯವರಿಗೆ ಮಾತನಾಡದಿದ್ರೆ ನಿದ್ರೆಯೇ ಬರುವುದಿಲ್ಲ. ಹೀಗಾಗಿ, ನಿತ್ಯ ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸುತ್ತೇವೆ:
ಇನ್ನೆರಡು ಗಂಟೆಯಲ್ಲಿ ಪರಿಷತ್ ಚುನಾವಣೆಗೆ (Council Election) ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 20 ಕಡೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುತ್ತಿದ್ದೇವೆ. ಒಂದು ವೇಳೆ ಯಾರಾದ್ರು ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ. ಎರಡು ಸ್ಥಾನ ಇರೋ ಕಡೆ ಒಬ್ಬರೇ ಅಭ್ಯರ್ಥಿ ಹಾಕ್ತಿದ್ದೇವೆ ಎಂದರು.
ಉನ್ನತ ಮಟ್ಟದ ತನಿಖೆಯಾಗಲಿ:
ಗುತ್ತಿಗೆದಾರರು ಪ್ರಧಾನಿ ಮೋದಿಗೆ ಪತ್ರ ಬರೆದ ವಿಚಾರದ ಕುರಿತು ಮಾತನಾಡಿದ ಅವರು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ನಾವು ಕೂಡ ನಾಮಪತ್ರ ಸಲ್ಲಿಕೆ ಮುಗಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ದೇಶದಲ್ಲಿ ಭ್ರಷ್ಟ ಸರ್ಕಾರವಿದ್ದರೆ ಅದು ಕರ್ನಾಟಕ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.