shikshana
ಕಾಮೆಡ್-ಕೆ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟ: ಉತ್ತಮ ಫಲಿತಾಂಶ ಪಡೆದ ಅಭ್ಯರ್ಥಿಗಳಿಗೆ ಸಚಿವ ಅಶ್ವಥ್ ನಾರಾಯಣ್ ಅಭಿನಂದನೆ
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಲಾದ ಕಾಮೆಡ್-ಕೆ ಯುಜಿ ಪರೀಕ್ಷೆಯ ಫಲಿತಾಂಶ ಭಾನುವಾರ ಪ್ರಕಟಿಸಲಾಗಿದ್ದು, ಉತ್ತಮ ಫಲಿತಾಂಶ ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಅಭಿನಂದನೆ ತಿಳಿಸಿದ್ದಾರೆ. ಹಾಗೆ ಉನ್ನತ ಶಿಕ್ಷಣದ ಮಹತ್ವಾಕಾಂಕ್ಷೆಯ ಗುರಿ ಹೊಂದಿರುವ ಎಲ್ಲಾ ವಿದ್ಯಾರ್ಥಿ ಮಿತ್ರರಿಗೆ ಶುಭ ಹಾರೈಕೆಗಳು.
ಜೀವನದ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ. ಇನ್ನು ಮೇ ನಲ್ಲಿ ನಡೆಯಬೇಕಾಗಿದ್ದ ಕಾಮೆಡ್-ಕೆ ಪರೀಕ್ಷೆಯನ್ನು ಕೋವಿಡ್ ಎರಡನೇ ಹಂತ , ಲಾಕ್ಡೌನ್ ಕಾರಣಗಳಿಂದಾಗಿ ಮೂರು ಬಾರಿ ಮುಂದೂಡಲಾಗಿದ್ದು, ಅಂತಿಮವಾಗಿ ಸೆ.14ರಂದು ಪರೀಕ್ಷೆ ನಡೆಸಲಾಗಿದೆ. ಅದಲ್ಲದೆ ದೇಶದಾದ್ಯಂತ 157 ನಗರಗಳಲ್ಲಿ 224 ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗಿತ್ತು.