ಇತ್ತೀಚಿನ ಸುದ್ದಿದೇಶ
ಕಾರ್ತಿ ಚಿದಂಬರಂ ಮನೆ, ಕಚೇರಿ ಮೇಲೆ ಸಿಬಿಐ ದಾಳಿ…?
ನವದೆಹಲಿ: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಮಗ ಕಾರ್ತಿ ಚಿದಂಬರಂಗೆ ಸಿಬಿಐ ಶಾಕ್ ನೀಡಿದೆ. ಚೀನಾ ಪ್ರಜೆಗಳಿಗೆ ವೀಸಾ ಕೊಡಿಸಲು 50 ಲಕ್ಷ ರೂ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಶಿವಗಂಗೆ ಸಂಸದ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಒಂಬತ್ತು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ತಲ್ವಾಂಡಿ ಸಾಬೋ ಪವರ್ ಲಿಮಿಟೆಡ್ ಯೋಜನೆಗಾಗಿ ಚೀನಾದ ಉದ್ಯೋಗಿಗಳಿಗೆ ವೀಸಾ ಒದಗಿಸಲು 50 ಲಕ್ಷ ರೂ ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಾರ್ತಿ ಚಿದಂಬರಂ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ.