ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ದೇಶದ ಮೊದಲ ಚಹರೆ ಪತ್ತೆ ತಂತ್ರಜ್ಞಾನ ಅಳವಡಿಕೆ
ಬೆಂಗಳೂರು, ಸೆಪ್ಟೆಂಬರ್ 22: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ ರೈಲು ನಿಲ್ದಾಣದಲ್ಲಿ ದೇಶದ ಮೊದಲ ಚಹರೆ ಪತ್ತೆ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ನೈಋತ್ಯ ರೈಲ್ವೆ ವಲಯವು ಚಹರೆ ಪತ್ತೆ ತಂತ್ರಜ್ಞಾನವನ್ನು ಅಳವಡಿಸಿರುವ ಭಾರತೀಯ ರೈಲ್ವೆಯ ಮೊದಲ ವಲಯವಾಗಿದೆ.
ಹೀಗೆ ಎಲ್ಲಾ ವಲಯಗಳಲ್ಲಿ ಭದ್ರತೆಯನ್ನು ಸುಧಾರಿಸಲು ಪ್ರಯತ್ನಿಸಲಾಗುತ್ತಿದೆ. ಇದು ಕೃತಕ ಬುದ್ಧಿಮತ್ತೆ ಅಪ್ಲಿಕೇಷನ್ ಆಧಾರಿತ ಅಪ್ಲಿಕೇಷನ್ ಆಗಿದ್ದು, ಅದರ ಆಧಾರದ ಮೇಲೆ ಮಾದರಿಯನ್ನು ವಿಶ್ಲೇಷಿಸುವ ಮೂಲಕ ವ್ಯಕ್ತಿಯನ್ನು ಗುರುತಿಸಬಹುದಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ರೈಲು ನಿಲ್ದಾಣಕ್ಕೆ ಸೆಪ್ಟೆಂಬರ್‌ನಲ್ಲಿ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಲಭ್ಯವಾಗಿದ್ದು, ಪ್ರಯಾಣಿಕರು ಯಾವುದೇ ಅಂಜಿಕೆ ಇಲ್ಲದೆ ನಿಲ್ದಾಣ ಪ್ರವೇಶಿಸಬಹುದು.
ಮೆಜೆಸ್ಟಿಕ್ ರೈಲು ನಿಲ್ದಾಣವನ್ನು ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಬಳಸಿಕೊಳ್ಳುತ್ತಿದ್ದಾರೆ. ರಜಾದಿನ ಬಂದರೆ ಈ ಸಂಖ್ಯೆ ದುಪ್ಪಟ್ಟಾಗುತ್ತದೆ. ಇಷ್ಟೊಂದು ಪ್ರಯಾಣಿಕರಿಗೆ ಭದ್ರತೆ ನೀಡುವುದು ಹಾಗೂ ಅಪರಾಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಸವಾಲಾಗಿದೆ.
ಹೀಗಾಗಿ, ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಭದ್ರತಾ ವ್ಯವಸ್ಥೆಯಧಿನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ರೈಲ್ವೆ ಭದ್ರತಾ ಪಡೆಯು ಈ ಹೊಸ ವ್ಯವಸ್ಥೆಯನ್ನು ಸೆಪ್ಟೆಂಬರ್‌ನಲ್ಲಿ ಅನುಷ್ಠಾನಗೊಳಿಸಲಾಗಿದೆ.
ಏರ್‌ಪೋರ್ಟ್‌ನಲ್ಲಿಅನುಷ್ಠಾನಗೊಳಿಸಿರುವ ಭದ್ರತಾ ವ್ಯವಸ್ಥೆಯನ್ನು ಮಾದರಿಯಾಗಿರಿಸಿಕೊಂಡು ಹೊಸ ವ್ಯವಸ್ಥೆ ರೂಪಿಸಲಾಗುತ್ತಿದೆ. ಯಶವಂತಪುರ ನಿಲ್ದಾಣದಲ್ಲೂ ಇನ್ನಷ್ಟು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.