ಇತ್ತೀಚಿನ ಸುದ್ದಿರಾಜ್ಯಸುದ್ದಿ
ಕೊಟ್ಟ ಮಾತು ಉಳಿಸಿಕೊಂಡ ಬಗ್ಗೆ ಹೆಮ್ಮೆಯಾಗುತ್ತಿದೆ..! ಡಾ.ಕೆ ಸುಧಾಕರ್
ಬೆಂಗಳೂರು: ಚಿಕ್ಕಬಳ್ಳಾಪುರಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಮಂಚೇನಹಳ್ಳಿಯನ್ನು ನೂತನ ತಾಲೂಕನ್ನಾಗಿ ಮಾಡಲು ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಮಂಚೇನಹಳ್ಳಿ ತಾಲ್ಲೂಕು ರಚನೆ ರಾಜ್ಯಪತ್ರದಲ್ಲಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಈ ಬಗ್ಗೆ ಕೆ. ಸುಧಾಕರ್ ಸಂತಸ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್,ನನ್ನ ಕೈ ಅಲ್ಲ ಎದೆ ಬಗಿದರೂ, ಮಂಚೇನಹಳ್ಳಿ ತಾಲ್ಲೂಕು ರಚನೆಯ ವಿಷಯದಲ್ಲಿ ನನ್ನ ಜನರಿಗೆ ಬದ್ಧನಾಗಿದ್ದೇನೆ ಎಂದು ಮಾತು ಕೊಟ್ಟಿದ್ದೆ. ಮಂಚೇನಹಳ್ಳಿ ತಾಲ್ಲೂಕು ರಚನೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಲಾಗಿದ್ದು, ರಾಜ್ಯಪಾತ್ರದಲ್ಲಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಕೊಟ್ಟ ಮಾತು ಉಳಿಸಿಕೊಂಡ ಬಗ್ಗೆ ತೃಪ್ತಿ, ಹೆಮ್ಮೆಯಾಗುತ್ತಿದೆ. ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ.