ಕೊನೆಗೂ ಬಹಿರಂಗವಾಯ್ತು ಅಲಿಯಾ ಭಟ್ ‘ಗಂಗೂಬಾಯಿ ಕಾಠಿಯವಾಡಿ’ ಬಿಡುಗಡೆ ದಿನಾಂಕ
ಬಾಲಿವುಡ್ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗಂಗೂಬಾಯಿ ಕಾಠಿಯವಾಡಿ ಸಿನಿಮಾದ ಬಿಡುಗಡೆ ದಿನಾಂಕ ಕೊನೆಗೂ ಬಹಿರಂಗವಾಗಿದೆ. ಅಲಿಯಾ ಭಟ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಗಂಗೂಬಾಯಿ ಸಿನಿಮಾಗೆ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿದ್ದಾರೆ.
ಕೊರೊನಾ ನಡುವೆಯೂ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದ್ದು, ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನಮಾಡಿತ್ತು. ಇದೀಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಬಹುನಿರೀಕ್ಷೆಯ ಸಿನಿಮಾ ಮುಂದಿನ ವರ್ಷ ತೆರೆಗೆ ಬರಲು ಸಜ್ಜಾಗಿದ್ದಾರೆ. ಮುಂದೆ ಓದಿ…
ಸಂಕ್ರಾಂತಿ ಹಬ್ಬಕ್ಕೂ ಮೊದಲು ಬರ್ತಿದೆ ಗಂಗೂಬಾಯಿ
ಮುಂದಿನ ವರ್ಷ ಜನವರಿಗೆ ಗಂಗೂಬಾಯಿ ಕಾಠಿಯವಾಡಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಅನೇಕ ಸಿನಿಮಾಗಳ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಕೊರೊನಾ ಕಾರಣದಿಂದ ಬಿಡುಗಡೆ ಮುಂದಕ್ಕೆ ಹೋಗಿದ್ದ ಸಿನಿಮಾಗಳೀಗ ರಿಲೀಸ್ ಡೇಟ್ ಬಹಿರಂಗ ಪಡಿಸಿದ್ದಾರೆ. ಗಂಗೂಬಾಯಿ ಸಿನಿಮಾ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದ್ದು, ಜನವರಿಯಲ್ಲಿ ಬರಲು ಸಜ್ಜಾಗಿದೆ.ಅಂದಹಾಗೆ ಗಂಗೂಬಾಯಿ ಸಿನಿಮಾ ಜನವರಿ 6ರಂದು ತೆರೆಗೆ ಬರುತ್ತಿದೆ. ಸಂಕ್ರಾಂತಿ ಸಮಯದಲ್ಲಿ ಅನೇಕ ಸಿನಿಮಾಗಳು ತೆರೆಗೆ ಬರುತ್ತಿವೆ. ಸಂಕ್ರಾಂತಿಗೂ ಮೊದಲೇ ಗಂಗೂಬಾಯಿ ಸಿನಿಮಾ ಬಿಡುಗಡೆಯಾಗಲಿದೆ. ಈ ಬಗ್ಗೆ ಸಂಜಯ್ ಲೀಲಾ ಬನ್ಸಾಲಿ ನಿರ್ಮಾಣ ಸಂಸ್ಥೆ ಟ್ವೀಟ್ ಮಾಡಿ ಅಧಿಕೃತಗೊಳಿಸಿದೆ. “ಜನವರಿ 6ರಂದು ಸಿನಿಮಾ ಗಂಗೂಬಾಯಿ ಕಥೆಯನ್ನು ನಿಮ್ಮ ಮುಂದಿಡುತ್ತಿದ್ದೇನೆ. ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ” ಎಂದು ಹೇಳಿದ್ದಾರೆ. ಈ ಮೊದಲು ಸಿನಿಮಾ ಒಟಿಟಿಯಲ್ಲಿ ಬರಲಿದೆ ಎನ್ನಲಾಗಿತ್ತು. ಆದರೀಗ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ.