ಆರೋಗ್ಯರಾಜಕೀಯ

ಕೊರೊನಾ ಸೋಂಕಿತರೆಷ್ಟು? ಬೇರೆ ಕಾಯಿಲೆ ಪೀಡಿತರೆಷ್ಟು?ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.?

ಬೆಂಗಳೂರು: ಕೊರೊನಾ ಉಲ್ಭಣಿಸುತ್ತಿದ್ದರೂ ರೋಗಿಗಳ ಆರೈಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸಿ ರಾಜ್ಯ ಬಿಜೆಪಿ ಸರ್ಕಾರ, ಬೆಚ್ಚಗೆ ಮಲಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

“ಮುಖ್ಯಮಂತ್ರಿಗಳೇ, ಪತ್ರಿಕೆಗಳಿಗೆ ಸುಳ್ಳುಗಳ ಜಾಹೀರಾತು ನೀಡಿ ತನ್ನ ಬೆನ್ನು ತಾನೇ ತಟ್ಟಿಕೊಳ್ಳುವುದಲ್ಲ,
ಅದೇ ಪತ್ರಿಕೆಗಳು ಪ್ರಕಟಿಸುತ್ತಿರುವ ಸತ್ಯ ಸಂಗತಿಗಳ ವರದಿಗಳನ್ನೂ ಓದಿ, ಎಚ್ಚೆತ್ತುಕೊಳ್ಳಿ.
ಕೊರೊನಾ ಸೋಂಕಿನ ಜೊತೆ ಅದೇ ರೀತಿಯ ರೋಗ ಲಕ್ಷಣಗಳ ಶೀತ-ನೆಗಡಿ-ಜ್ವರಗಳ ಬಾಧೆಯೂ ಹೆಚ್ಚುತ್ತಿರುವುದರಿಂದ ಯಾವುದು ಕೊರೊನಾ ಯಾವುದು ಅಲ್ಲ ಎನ್ನುವುದನ್ನು ತಿಳಿದುಕೊಳ್ಳಲಾಗದೆ ಜನ ಗೊಂದಲದಲ್ಲಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಸೋಂಕಿತರು ಮನೆಯಲ್ಲಿಯೇ ಇರಿ ಎಂದು ಸರ್ಕಾರವೇ ಹೇಳಿ ಆ ಗೊಂದಲವನ್ನು ಇನ್ನಷ್ಟು ಹೆಚ್ಚಿಸುತ್ತಿದೆ.
ಶೀತ, ಜ್ವರದಿಂದ ಬಳಲುತ್ತಿರುವವರಲ್ಲಿ ಶೇಕಡಾ 90-93 ರಷ್ಟು ಜನ ಆಸ್ಪತ್ರೆಗೆ ಹೋಗದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ.ಇವರಲ್ಲಿ ಕೊರೊನಾ ಸೋಂಕಿತರೆಷ್ಟು? ಬೇರೆ ಕಾಯಿಲೆ ಪೀಡಿತರೆಷ್ಟು ಎನ್ನುವುದರ ಬಗ್ಗೆ ನಿಖರವಾದ ಮಾಹಿತಿ ಸರ್ಕಾರದಲ್ಲಿಯೂ ಇಲ್ಲ. ಇದು ಅಪಾಯಕಾರಿ ಅಲ್ಲವೇ? ಎಂದು ಅವರು ಪ್ರಶ್ನಿಸಿದರು.

ಕೋವಿಡ್ ಚಿಕಿತ್ಸೆಗೆ ನಿಗದಿತ 1.94 ಲಕ್ಷ ಹಾಸಿಗೆಗಳಲ್ಲಿ 51,093 ಹಾಸಿಗೆಗಳು ಮಾತ್ರ ಸರ್ಕಾರಿ, ಉಳಿದೆಲ್ಲವೂ ಖಾಸಗಿ ಆಸ್ಪತ್ರೆಗಳಿಗೆ ಸೇರಿವೆ ಎಂದು ವರದಿಗಳು ಹೇಳುತ್ತಿವೆ.ಈ ವ್ಯವಸ್ಥೆ ಜನಹಿತಕ್ಕಾಗಿಯೇ? ಇಲ್ಲವೆ, ಖಾಸಗಿ ಆಸ್ಪತ್ರೆಗಳ ಹಿತಕ್ಕಾಗಿಯೇ? ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದರು.

ಕೊರೊನಾ ಸೋಂಕು ಶೀಘ್ರಗತಿಯಲ್ಲಿ ಹಳ್ಳಿಗಳಿಗೆ ಹರಡುತ್ತಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಹಿಂದಿನ ವೈಫಲ್ಯಗಳ ಅನುಭವದ ಹೊರತಾಗಿಯೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕೆಲಸವನ್ನು ಮಾಡದೆ ಕರ್ಫ್ಯೂ-ಲಾಕ್ ಡೌನ್ ಗಳನ್ನು ನಂಬಿ ಕೂತಿದೆ ಎಂದು ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button