ಕೋಟಿಗಳ ಒಡೆಯ ಮುದ್ದು ಮಾದಪ್ಪ.
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಮಾದಪ್ಪನ ಸನ್ನಿಧಿಯಲ್ಲಿ
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಹುಂಡಿ ಎಣಿಕೆ ಕಾರ್ಯವು ಬೆಳಿಗ್ಗೆ 6.30 ಗಂಟೆಯಿಂದ ಪ್ರಾರಂಭಿಸಲಾಯಿತು ,ಇದೇ ಸಮಯದಲ್ಲಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಹಾಗೂ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಪ್ರಾರಂಭವಾಗಿ ಸಂಜೆ 7.00ಗೆ ಮುಕ್ತಾಯಗೊಂಡಿದ್ದು . ಕೇವಲ 27 ದಿನಗಳಲ್ಲಿ ಒಟ್ಟು ಮೊತ್ತ ರೂ.2,43,65,775.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 62 ಗ್ರಾಂ, ಬೆಳ್ಳಿ 2 ಕೆ.ಜಿ 512 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಎಸ್ ಡಿ ಎ ಸಂಗೀತ, ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಸೇರಿದಂತೆ ದೇವಾಲಯದ ನೌಕರರು ಹಾಜರಿದ್ದರು.