ಸುದ್ದಿ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಕೊಡಿ: ಸಿದ್ದರಾಮಯ್ಯ

ಬೆಂಗಳೂರು: ‘ವಿಕೋಪಗಳಿಂದ ಮೃತ ಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ರಾಜ್ಯ ಸರ್ಕಾರವು ಷರತ್ತುರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆ, ಕೋವಿಡ್‌ನಿಂದ ಮೃತಪಟ್ಟ ಎಲ್ಲ ವಾರಸುದಾರರಿಗೂ ₹ 5 ಲಕ್ಷ ಪರಿಹಾರ ಕಡ್ಡಾಯವಾಗಿ ನೀಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಕೋವಿಡ್ ಎರಡೂ ಅಲೆಗಳಿಂದ ರಾಜ್ಯದಲ್ಲಿ ಕನಿಷ್ಠ 4 ಲಕ್ಷ ಜನ ಮರಣ ಹೊಂದಿದ್ದಾರೆ. ಕೆಲವು ಕುಟುಂಬ ಗಳು ದುಡಿಯುವ ಸದಸ್ಯರನ್ನು ಕಳೆದು ಕೊಂಡು ಅನಾಥವಾಗಿವೆ. ತಂದೆ- ತಾಯಿಯನ್ನು ಕಳೆದುಕೊಂಡ ಮಕ್ಕಳು ದಿಕ್ಕು ತೋಚದೆ ಕೂತಿದ್ದಾರೆ. ದುಡಿವ ಮಕ್ಕಳನ್ನು ಕಳೆದುಕೊಂಡ ವೃದ್ಧ ತಂದೆ ತಾಯಿ ತಬ್ಬಲಿಗಳಾಗಿದ್ದಾರೆ. ಅಸಹಾಯ ಕರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳ ಬೇಕಾದರೆ ನೊಂದ ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು’ ಎಂದಿದ್ದಾರೆ.

‘ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡು ವುದರಿಂದ ತಪ್ಪಿಸಿಕೊಳ್ಳುವ ಉದ್ದೇಶ ದಿಂದಲೇ ಕೇಂದ್ರ, ರಾಜ್ಯ ಸರ್ಕಾರ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಿರುಚಿ ನೊಂದ ಜನರಿಗೆ ದ್ರೋಹ ಎಸಗುತ್ತಿದೆ’ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button