ಇತ್ತೀಚಿನ ಸುದ್ದಿರಾಜಕೀಯಸುದ್ದಿ

ಜಮೀರ್ ಅಹ್ಮದ್, ರೋಷನ್ ಬೇಗ್ ಜೆಡಿಎಸ್ ಸೇರುವುದು ಬಹಿತೇಕ ಖಚಿತ……?

ಕಳೆದ ತಿಂಗಳು ದೆಹಲಿಯಲ್ಲಿ ಎಐಸಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಡೆಸಿದ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪಾಲ್ಗೊಂಡಿದ್ದರು.

ಈ ಮೂವರು ನಾಯಕರು ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮುಖಂಡರನ್ನು ಜೊತೆಗೆ ಕರೆದೊಯ್ದಿದ್ದರು. ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಸದಾ ಅವರೊಂದಿಗೆ ತೆರಳುತ್ತಿದ್ದ ಜಮೀರ್ ಅಹಮದ್​ಗೆ ಆಹ್ವಾನ ಸಿಕ್ಕಿರಲಿಲ್ಲ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು ದೂರವಿರಿಸಿದರೆ ಎಂಬ ಮಾಹಿತಿಯೂ ಇದೆ.

ಒಂದು ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದ ಜಮೀರ್ ಅಹಮದ್ ಇದೀಗ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿರುವ ಹಾಗೂ ಮುಖ್ಯವಾಗಿ ಸಿದ್ದರಾಮಯ್ಯ ತಮ್ಮನ್ನು ದೂರ ಇರಿಸಿರುವುದಕ್ಕೆ ತೀವ್ರ ಬೇಸರಗೊಂಡಿದ್ದಾರೆ.

ಅಸಮಾಧಾನಿತರನ್ನು ಜೆಡಿಎಸ್​​​ನತ್ತ ಸೆಳೆಯಲು ಇಬ್ರಾಹಿಂ ಪ್ರಯತ್ನ: ಇವರಿಗಿರುವ ಈ ಅಸಮಾಧಾನವನ್ನು ಸದ್ಬಳಕೆ ಮಾಡಿಕೊಂಡು ಜೆಡಿಎಸ್​ನತ್ತ ಮತ ಸೆಳೆಯುವ ಪ್ರಯತ್ನಕ್ಕೆ ಸಿಎಂ ಇಬ್ರಾಹಿಂ ಮುಂದಾಗಿದ್ದಾರೆ. ಜಮೀರ್​​ರನ್ನ ಭೇಟಿಯಾಗಿ ಜೆಡಿಎಸ್​ ಸೇರುವಂತೆ ಒತ್ತಾಯ ಮಾಡಿದ್ದಾರೆ. ಪಕ್ಷದ ವಿರುದ್ಧ ತೀವ್ರ ಬೇಸರಗೊಂಡಿರುವ ಜಮೀರ್, ನಿನ್ನೆ ರಾಹುಲ್ ಗಾಂಧಿ ರಾಜ್ಯ ಭೇಟಿ ಸಂದರ್ಭದಲ್ಲಿಯೂ ಕಾಣಿಸಿಕೊಂಡಿಲ್ಲ. ಅವರು ಸಹ ಕಾಂಗ್ರೆಸ್ ತೊರೆಯುವ ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಹೊಂದಿರುವ ಚಾಮರಾಜಪೇಟೆ ಕ್ಷೇತ್ರದಿಂದ ಜಮೀರ್ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಯಾವ ಪಕ್ಷದಿಂದ ಕಣಕ್ಕಿಳಿದರೂ ಗೆಲ್ಲುವುದು ನಿಶ್ಚಿತ ಎಂಬ ಆತ್ಮವಿಶ್ವಾಸ ಹೊಂದಿದ್ದಾರೆ.

ಇದರಿಂದಲೇ ಮುಂಬರುವ ದಿನಗಳಲ್ಲಿ ಜೆಡಿಎಸ್ ನಾಯಕರ ಜೊತೆ ಸಮಾಲೋಚಿಸಿ, ಮುಂದಿನ ವಿಧಾನಸಭೆ ಚುನಾವಣೆ ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಭೋಜನಕೂಟದಲ್ಲಿ ಭಾಗಿ: ರೋಷನ್ ಬೇಗ್ ಜೊತೆ ಸಿಎಂ ಇಬ್ರಾಹಿಂ ಸುದೀರ್ಘ ಮಾತುಕತೆ ನಡೆಸಿದ ಬಳಿಕ ಬೆಂಗಳೂರಿನ ಹೆಬ್ಬಾಳದ‌ ಜೆಡಿಎಸ್ ನಾಯಕ ರುದ್ರಪ್ಪ ಅವರ ಮನೆಗೆ ತೆರಳಿ ಅಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ಯುಗಾದಿ ಹಬ್ಬ ಆಚರಿಸಿ ಸಾಮೂಹಿಕ ಭೋಜನ ಮಾಡುವ ಮೂಲಕ ನಾಡಿಗೆ‌‌ ಸೌಹಾರ್ದ ಸಂದೇಶ ಸಾರಿದ್ದಾರೆ.

ರೋಷನ್ ಬೇಗ್ ಜೆಡಿಎಸ್ ಸೇರುವುದು ಬಹಿತೇಕ ಖಚಿತವಾಗಿದ್ದು ಜಮೀರ್ ಅಹ್ಮದ್ ತಮ್ಮ ನಿರ್ಧಾರ ತೆಗೆದುಕೊಳ್ಳುವುದು ಬಾಕಿ ಇದೆ. ಎರಡು ವರ್ಷದ ಹಿಂದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಿಸಿದ 17 ಶಾಸಕರಲ್ಲಿ ಒಬ್ಬರಾಗಿದ್ದ ರೋಷನ್ ಬೇಗ್, ನಂತರ ಬಿಜೆಪಿಯನ್ನು ಸೇರಲಾಗದೆ ಶಿವಾಜಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲನುಭವಿಸಿ ರಾಜಕೀಯ ಅತಂತ್ರ ಸ್ಥಿತಿಗೆ ತಲುಪಿದ್ದರು. ಇದೀಗ ಜೆಡಿಎಸ್ ಸೇರ್ಪಡೆಯಾಗಿ ಮುಂದಿನ ವಿಧಾನಸಭೆ ಚುನಾವಣೆಗೆ ಶಿವಾಜಿನಗರ ಅಭ್ಯರ್ಥಿಯಾಗುವ ಸಿದ್ಧತೆ ಮಾಡಿಕೊಳ್ಳಲು ಚಿಂತನೆ ನಡೆಸಿದಂತಿದೆ.

‘ಕೈ’ಗೆ ಮತ್ತಷ್ಟು ಬಂಡಾಯದ ಆತಂಕ: ರಾಜ್ಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸಿಕೊಂಡು ಸಾಗುವ ಹಾಗೂ ಪಕ್ಷವನ್ನು ಬಲವರ್ಧನೆಗೊಳಿಸುವ ಮಹತ್ವದ ಗುರಿಯನ್ನು ನೀಡಿ ರಾಜ್ಯದ ನಾಯಕರಿಗೆ ನೀಡಿ ದೆಹಲಿಗೆ ತೆರಳಿದ್ದಾರೆ. ಆದರೆ, ಇತ್ತ ಪಕ್ಷದಲ್ಲಿ ಅತೃಪ್ತ ನಾಯಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿದ್ದ ಎಸ್​.ಆರ್​ ಪಾಟೀಲ್​ಗೆ ಕಳೆದ ಡಿಸೆಂಬರ್​​ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಲಭಿಸಿರಲಿಲ್ಲ. ಇದರಿಂದ ಬೇಸರಗೊಂಡಿರುವ ಅವರು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button