ದೇಶ

ಜ.13ರಿಂದ 15-18 ವರ್ಷದ ಮಕ್ಕಳಿಗೆ ಲಸಿಕೆ, ವೈದ್ಯಕೀಯ ಸಿಬ್ಬಂದಿಗೆ ಬೂಸ್ಟರ್ ಡೋಸ್

ಮಕ್ಕಳಿಗೆ ಕೊರೊನಾ ಲಸಿಕೆ(Children Vaccine) ಮತ್ತು ವೈದ್ಯಕೀಯ ಸಿಬ್ಬಂದಿಗೆ ಬೂಸ್ಟರ್ ಡೋಸ್(Booster Dose)ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ದೇಶವನ್ನುದ್ದೇಶಿಸಿ ತುರ್ತು ಭಾಷಣ ಮಾಡಿರುವ ಅವರು, ಒಮಿಕ್ರಾನ್ ರೂಪಾಂತರಿ ವೈರಸ್ ಬಗ್ಗೆ ಆತಂಕ ಬೇಡ, ಆದರೆ ಎಚ್ಚರವಹಿಸಿ ಎಂದು ದೇಶದ ಜನರಿಗೆ ಸಲಹೆ ನೀಡಿದ್ದಾರೆ.

‘ಇಂದು ನಮ್ಮ ದೇಶವು ಮಹತ್ವದ ನಿರ್ಣಯ ತೆಗೆದುಕೊಂಡಿದೆ. 15 ರಿಂದ 18 ವರ್ಷದ ಮಕ್ಕಳಿಗೆ ದೇಶದಲ್ಲಿ ಲಸಿಕೆ ನೀಡಲಾಗುತ್ತದೆ. ಜನವರಿ 3ರಿಂದ ಮಕ್ಕಳಿಗೆ ಲಸಿಕೆ ವಿತರಣೆ ಆರಂಭವಾಗಲಿದೆ. ಆರೋಗ್ಯ ಕಾರ್ಯಕರ್ತರಿಗೆ ಜನವರಿ 10ರಿಂದ ಬೂಸ್ಟರ್​ ಡೋಸ್(Booster Dose)ನೀಡಲಾಗುವುದು. ಶಾಲಾ-ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡಲಾಗುವುದು. ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಪ್ರಿಕಾಶನ್ ಡೋಸ್ ನೀಡುತ್ತೇವೆ’ ಅಂತಾ ಹೇಳಿದ್ದಾರೆ.

ದೇಶದಲ್ಲಿ ಲಸಿಕಾಕರಣ ಪ್ರಕ್ರಿಯೆ ಆರಂಭವಾಗಿ 11 ತಿಂಗಳಾಗಿದೆ. ಸಾಮೂಹಿಕ ಇಚ್ಛಾಶಕ್ತಿಯಿಂದ ಕೊರೊನಾ(Coronavirus) ವಿರುದ್ಧ ನಾವು ಹೋರಾಟ ಮುಂದುವರಿಸಬೇಕಿದೆ. ಕೊವಿಡ್, ಒಮಿಕ್ರಾನ್ ಬಗ್ಗೆ ಯಾವುದೇ ರೀತಿಯ ಆತಂಕಬೇಡ, ಆದರೆ ಎಚ್ಚರಿಕೆ ಇರಲಿ. ದೇಶದಲ್ಲಿ ಈವರೆಗೆ 141 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಶೇ.61ರಷ್ಟು ಯುವಕರಿಗೆ ಲಸಿಕೆ ನೀಡಲಾಗಿದೆ. ಜನರನ್ನು ಆರೋಗ್ಯವಾಗಿ ಇರಿಸಲು ನಿರಂತರ ಶ್ರಮಿಸುತ್ತಿದ್ದೇವೆ. ಲಸಿಕಾ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಅಂತಾ ಪ್ರಧಾನಿ ಮೋದಿ(Narendra Modi) ಹೇಳಿದ್ದಾರೆ.

ಇದೇ ವೇಳೆ ದೇಶದ ಜನರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಪ್ರಧಾನಿ ಮೋದಿ(PM Modi) ತಿಳಿಸಿದ್ದಾರೆ. 2022ರ ಹೊಸ ವರ್ಷವನ್ನು ಪ್ರತಿಯೊಬ್ಬರೂ ಅತ್ಯಂತ ಸಂತಸದಿಂದ ಸ್ವಾಗತಿಸೋಣವೆಂದು ಹೇಳಿದ ಅವರು, ‘ದೇಶಕ್ಕೆ ಒಮಿಕ್ರಾನ್ ಸೋಂಕು ಕಾಡುತ್ತಿದೆ. ಮುಂಜಾಗೃತಾ ದೃಷ್ಟಿಯಿಂದ ಹೆಚ್ಚುವರಿ ಐಸಿಯು, ಆಕ್ಸಿಜನ್ ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ. ವಿಶ್ವದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದೆ. ಯಾರೊಬ್ಬರೂ ಕೂಡ ಈ ಬಗ್ಗೆ ನಿರ್ಲಕ್ಷ್ಯವಹಿಸಬೇಡಿ’ ಅಂತಾ ತಿಳಿಸಿದ್ದಾರೆ.

ಪ್ರತಿಯೊಬ್ಬರೂ ಕೋವಿಡ್-19(COVID-19) ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸಚ್ಛತೆ ಕಾಯ್ದುಕೊಳ್ಳುವುದು ಹೀಗೆ ಪ್ರತಿಯೊಂದು ನಿಯಮಗಳನ್ನು ನಾವು ಪಾಲಿಸಬೇಕಿದೆ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆಗೆ ದೇಶದ ಜನರು ಕೈಜೋಡಿಸಬೇಕು. ಎಲ್ಲರೂ ಸೇರಿ ಒಟ್ಟಾಗಿ ಕೊರೊನಾ ಮಹಾಮಾರಿಯ ವಿರುದ್ಧ ಹೋರಾಟ ಮಾಡೋಣವೆಂದು ಪ್ರಧಾನಿ ಮೋದಿ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button