ರಾಜ್ಯ

ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ಮಸೂದೆ ಅಂಗೀಕಾರ: ಕಾಂಗ್ರೆಸ್​ ಮುಂದಿನ ನಡೆಯೇನು..?

ವಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಧ್ವನಿ ಮತದ ಮೂಲಕ ವಿಧೇಯಕ ಅಂಗೀಕಾರ ಮಾಡಲಾಗಿದ್ದು, ​ಸದನದಲ್ಲಿ ತೀವ್ರ ಗದ್ದಲ ಆರಂಭವಾಗಿದೆ.

ಬಿಜೆಪಿ ಸರ್ಕಾರ ಜಾರಿ ತರಲು ಹೊರಟ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್​ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಸೂದೆ ಬಗ್ಗೆ ಗೃಹ ಸಚಿವರು ಹಾಗೂ ಕಾನೂನು ಸಚಿವರು ಸವಿವರವಾಗಿ ಸದನದಲ್ಲಿ ತಿಳಿಸಿದ್ದು, ಈ ಬಗ್ಗೆ ಸತತ ಮೂರು ದಿನಗಳ ಕಾಲ ಚರ್ಚೆ ನಡೆದಿದೆ. ಇಂದು ಸ್ಷೀಕರ್​ ಕಾಗೇರಿ ಮತಾಂತರ ನಿಷೇಧ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿದ್ದ, ಹೆಚ್ಚಿನ ವಿಧಾನ ಸಭಾ ಸದಸ್ಯರು ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಬೆಂಬಲ ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button