ರಾಜ್ಯ

ದೇವಸ್ಥಾನಗಳು ಸರ್ಕಾರದ ಹಿಡಿತದಿಂದ ಮುಕ್ತವಾಗಬೇಕು-ಖುಷ್ಬೂ

ಬೆಂಗಳೂರು: ಬಿಜೆಪಿ ನಾಯಕಿ ನಟಿ ಖುಷ್ಬೂ ಇಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ದೇವಸ್ಥಾನಗಳನ್ನು ಕಾನೂನಿನಿಂದ ಮುಕ್ತ ಮಾಡುವ ವಿಚಾರಕ್ಕೆ ಬೆಂಬಲ ಸೂಚಿಸಿದ್ದಾರೆ.

ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಖುಷ್ಬೂ ದೇವಸ್ಥಾನಗಳು ಮುಕ್ತವಾಗಬೇಕು. ಸರ್ಕಾರದ ಹಿಡಿತದಿಂದ ಮುಕ್ತ ಮಾಡುತ್ತಿರುವುದಕ್ಕೆ ಸ್ವಾಗತ ಇದೆ. ತಮಿಳುನಾಡಿನಲ್ಲೂ ಈ ಒತ್ತಾಯ ಇದೆತಮಿಳು‌ನಾಡು ಸರ್ಕಾರದ ನಡೆ ಏನಿರುತ್ತೆ ಅಂತ ನಾವೂ ಕಾದು ನೋಡ್ತಿದ್ದೇವೆ. ತಮಿಳುನಾಡಿನಲ್ಲೂ ಚುನಾವಣೆ ವೇಳೆ ದೇವಸ್ಥಾನಗಳನ್ನು ಮುಕ್ತ ಗೊಳಿಸುವ ಭರವಸೆ ಕೊಡಲಾಗಿತ್ತು ಎಂದರು.

ಇನ್ನು ಪ್ರಧಾನಿ ನೇತೃತ್ವದ ಪೋಷಣ್ ಅಭಿಯಾನದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಸ್ವಸ್ಥ ಬಾಲಕ್, ಸ್ವಸ್ಥ ಬಾಲಿಕಾ ಸ್ಪರ್ಧೆ ಇದೆ. ಅಪೌಷ್ಟಿಕತೆಯುಳ್ಳ 0-6 ವರ್ಷದ ಮಕ್ಕಳನ್ನು ದೇಶಾದ್ಯಂತ ಪತ್ತೆ ಮಾಡಲಾಗ್ತಿದೆ. ಆಶಾವಾಡಿ, ಅಂಗನವಾಡಿಗಳಲ್ಲಿ ಈ ಮಕ್ಕಳ ನೋಂದಣಿ ಮಾಡುವ ಕಾರ್ಯ ನಡೀತಿದೆ. ಈ ಅಭಿಯಾನವನ್ನು ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳುವ ಬಗ್ಗೆ ಸಿಎಂ ಬೊಮ್ಮಾಯಿ‌ ಜೊತೆ ಇಂದು ಚರ್ಚೆ ನಡೆಸಿದ್ದೇನೆ ಎಂದರು.

Related Articles

Leave a Reply

Your email address will not be published. Required fields are marked *

Back to top button