
ಶ್ರೀನಗರ: ಪಹಲ್ಗಾಮ್(Pahalgan) ದಾಳಿಯಲ್ಲಿ ಕೈವಾಡವಿದೆ ಎನ್ನಲಾದ ಶಂಕಿತ ಉಗ್ರರ ಮನೆಗಳನ್ನು ಅಧಿಕಾರಿಗಳು ಕೆವಿದ್ದಾರೆ. ಇದಕ್ಕೆ ಉರಿದುಕೊಂಡಿರುವ ಟಿಆರ್‌ಎಫ್‌ನ ಉಗ್ರರು ನಮ್ಮ ಮನೆಗಳನ್ನು ನಾಶಮಾಡ್ತೀರಾ, ಇದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನಿಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನಲ್ಲಿರುವ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಅವರೆಲ್ಲರೂ ಹಿಂದೂಗಳ ಮೇಲೆ ದಾಳಿ ನಡೆಸಿದ್ದರು. ಮೊದಲು ಟಿಆರ್ಎಫ್ ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು.ಬಳಿಕ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿ, ಪ್ರಧಾನಿ ಪ್ರಧಾನಿ ಈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಂದು ಉಗ್ರನಿಗೂ ಊಹಿಸಲಾಗದ ಶಿಕ್ಷೆ ಕೊಡುವುದಾಗಿ ಘೋಷಿಸಿದ ಬಳಿಕ ಟಿಆರ್ಎಫ್ ಉಲ್ಟಾ ಹೊಡೆದಿತ್ತು. ಯಾರೋ ನಮ್ಮ ವೆಬ್ಸೈಟ್ ಹ್ಯಾಕ್ ಮಾಡಿದ್ದಾರೆ. ನಮಗೂ ದಾಳಿಗೂ ಸಂಬಂಧವೇ ಇಲ್ಲ ಎಂದು ಹೇಳಿತ್ತು.
ಇದೀಗ ಅದರ ಕಮಾಂಡರ್ ಅಹ್ಮದ್ ಸಲಾರ್ ಅವರ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಉಗ್ರರ ಮನೆಗಳಲ್ಲಿ ನಡೆದ ಸ್ಫೋಟ ಹಾಗೂ ಭಯೋತ್ಪಾದಕ ಸಂಬಂಧಿಕರ ಹತ್ಯೆ ಬಗ್ಗೆ ಉಲ್ಲೇಖಿಸಲಾಗಿದೆ. ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರಿಂದ ಸೇಡು ತೀರಿಸಿಕೊಳ್ಳುತ್ತೇವೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ.
ಪಹಲ್ಗಾಮ್ ದಾಳಿಯಲ್ಲಿ ಟಿಅರ್ಎಫ್ ಸಂಘಟನೆಯ ಯಾವ ಸದಸ್ಯನೂ ಭಾಗಿಯಾಗಿಲ್ಲ ಎಂಬುದನ್ನ ನಾವು ಸ್ಪಷ್ಟಪಡಿಸುತ್ತೇವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.ಸೈಫುಲ್ಲಾ ಖಾಲಿದ್ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್ಗೆ ಆಪ್ತ ಎಂದು ಪರಿಗಣಿಸಲಾಗಿದೆ. ಸೈಫುಲ್ಲಾಗೆ ಐಷಾರಾಮಿ ಕಾರುಗಳೆಂದರೆ ಇಷ್ಟ, ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ.ಸೈಫುಲ್ಲಾ ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆಂದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್ನ ಕಂಗನ್ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು.