ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸುಮ್ಮನೆ ಕೂರುವವನು ನಾನಲ್ಲ, ವಿಧಾನ ಪರಿಷತ್ ಚುನಾವಣೆಯಲ್ಲಿ 15-17 ಸ್ಥಾನ ಗೆಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸದ ನುಡಿ ಜೊತೆಗೆ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟರು. ಸಂತೇಮರಹಳ್ಳಿಯಲ್ಲಿ ರಘು ಕೌಟಿಲ್ಯ ಪರ ಮತಯಾಚಿಸಿ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಸತತ ಟೀಕೆ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಬೆಳಗಾವಿ ಅಧಿವೇಶನದಲ್ಲೇ ಉತ್ತರ ಕೊಡುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಕಾಂಗ್ರೆಸ್ ದೇಶದಲ್ಲಿ ಧೂಳಿಪಟವಾಗಿದ್ದು, ಕರ್ನಾಟಕದಲ್ಲಷ್ಟೇ ಉಸಿರಾಡುತ್ತಿದೆ. ವೆಂಕ, ನಾಣಿ, ಸುಬ್ಬ ಎಂಬಂತೆ ಲೋಕಸಭೆಲ್ಲಿ ಕಾಂಗ್ರೆಸ್ 46 ಸ್ಥಾನಕ್ಕೆ ಇಳಿದಿದೆ. ಆದರೆ, 26 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಆಧಾರ ರಹಿತ ಟೀಕೆಗಳಿಗೆ ಈ ಚುನಾವಣಾ ಫಲಿತಾಂಶವೇ ಉತ್ತರ ಕೊಡಲಿದೆ ಎಂದು ಕೈ ಪಾಳೆಯದ ವಿರುದ್ಧ ಬಿಎಸ್ವೈ ಗುಡುಗಿದರು. ಯಡಿಯೂರಪ್ಪ ರಾಜೀನಾಮೆ ನೀಡಿ ಮನೆಗೆ ಹೋಗ್ತಾರೆ ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ನಾನು ಮನೆಯಲ್ಲಿ ಕೂರುವ ವ್ಯಕ್ತಿಯಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಇನ್ನೂ ಮನೆ ಸೇರಿಲ್ಲ, ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಇನ್ನೂ 25 ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಕೂರಬೇಕಾಗುತ್ತದೆ ಎಂದು ಭವಿಷ್ಯ ನುಡಿದರು.
With Product You Purchase
Subscribe to our mailing list to get the new updates!
Lorem ipsum dolor sit amet, consectetur.
Related Articles
Check Also
Close