ಇತ್ತೀಚಿನ ಸುದ್ದಿ

ಪೌತಿ ಖಾತಾ ಆಂದೋಲನದಲ್ಲಿ ರಾಜ್ಯದಲ್ಲಿ ಮಂಡ್ಯ ಜಿಲ್ಲೆ ಕಂದಾಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿಗಳಿಂದ ಶ್ಲಾಘನೆ

ಮಂಡ್ಯ ಜ.12 (ಕರ್ನಾಟಕ ವಾರ್ತೆ) ಕಂದಾಯ ಇಲಾಖೆಯಲ್ಲಿನ ಇ- ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವುದರಿಂದ ಆಗಿದ್ದು ಕಂದಾಯ ಇಲಾಖೆಯ ನೌಕರರ ಕಾರ್ಯಕ್ಷಮತೆ ಬಗ್ಗೆ ಜಿಲ್ಲಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಕುಂದು ಕೊರತೆಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇ ಪೌತಿ ಖಾತೆ, ಸಕಾಲ ಅರ್ಜಿಗಳು, ಬೆಳೆ ಸಮೀಕ್ಷೆ ಹಾಗೂ ಎಲ್ಲಾ ವಿಷಯಗಳಲ್ಲಿ ಗುರಿ ನಿಗದಿಪಡಿಸುತ್ತಿರುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತವಾಗಿ ಕೆಲಸ ಮಾಡಿಕೊಟ್ಟ ಹಾಗೇ ಆಗುತ್ತಿದೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಪೌತಿ ಖಾತೆ ಆಂದೋಲನದ ಕೆಲಸವನ್ನು ಕಾನೂನು ಬದ್ಧವಾಗಿ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ಸರ್ಕಾರದ ಮಟ್ಟದಲ್ಲಿ ಇದೆ. ಸರ್ಕಾರದಕ್ಕೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಲಾಗಿದ್ದು ನೇಮಕಾತಿ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಸರ್ಕಾರದಿಂದ ಆಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕಂದಾಯ ಇಲಾಖೆಯ ನೌಕರರಿಗೆ ಕಾಲ ಮಿತಿ ವೇತನ ಬಡ್ತಿ ಪ್ರಕ್ರಿಯೆ ಪ್ರೊಬೇಷನರಿ ಘೋಷಣೆ ವಿಳಂಬ ಆಗದಂತೆ ತುರ್ತಾಗಿ ಮಾಡಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಬೇಕು. ವೇತನ ಪಾವತಿ ಪ್ರತಿ ತಿಂಗಳು ತಡ ಆಗದಂತೆ ಮಾಡಲು ಬಟವಾಡೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಕಂದಾಯ ಇಲಾಖೆಯಲ್ಲಿ ನೌಕರರ ಮೇಲೆ ಇಲಾಖಾ ವಿಚಾರಣೆಗಳನ್ನು ಬಾಕಿ ಇದ್ದು ನಿಗದಿತ ಅವಧಿಯೊಳಗೆ ತುರ್ತಾಗಿ ವಿಚಾರಣೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಗ್ರಾಮ ಸಹಾಯಕರು ಸೇವಾ ಅವಧಿಯಲ್ಲಿ ಮೃತಪಟ್ಟಲ್ಲಿ ಅವರ ಕುಟುಂಬಸ್ಧರಿಗೆ ಅನುಕಂಪದ ನೇಮಕಾತಿಯನ್ನು ವಿಳಂಬ ಆಗದಂತೆ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ತುರ್ತಾಗಿ ನೇಮಕಾತಿ ಮಾಡಿಕೊಳ್ಳುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ. ಶಿವಾನಂದ ಮೂರ್ತಿ ಅವರು ಸಾರ್ವಜನಿಕರ ಕೆಲಸವನ್ನು ಮಾಡಲು ಅಧಿಕಾರಿಗಳು ವಿಳಂಬ ಆಗದಂತೆ ತುರ್ತಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಿಗದಿತ ಅವಧಿಯೊಳಗೆ ಸಾರ್ವಜನಿಕರ ಕೆಲಸವನ್ನು ಮಾಡಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ.ಎಂ, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ತಮ್ಮಣ್ಣ ಗೌಡ, ಜಿಲ್ಲಾ ಗ್ರಾಮಾಡಳಿತಧಿಕಾರಿಗಳ ಸಂಘದ ಅಧ್ಯಕ್ಷರಾದ ಹರೀಶ್ ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರ್ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button