ಇತ್ತೀಚಿನ ಸುದ್ದಿರಾಜ್ಯ
ಫೆ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ
ಬೆಂಗಳೂರು, ಫೆ.03: ಫೆಬ್ರವರಿ ಮೊದಲ ವಾರದಿಂದಲೇ ರಾಜ್ಯದಲ್ಲಿ ಚಳಿ ಕಡಿಮೆಯಾಗುತ್ತಿದೆ. ಮುಂದಿನ 48 ಗಂಟೆಗಳು, ಅಂದರೆ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಗುಡುಗು ಮುನ್ನೆಚರಿಕೆ ಅಥವಾ ಮಳೆಯ ಮುನ್ನೆಚರಿಕೆ ನೀಡಿಲ್ಲ. ಮೀನುಗಾರರಿಗೆ ಕೂಡಾ ಯಾವುದೇ ಮುನ್ಸೂಚನೆ ನೀಡಿಲ್ಲ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ ಫೆಬ್ರವರಿ 03 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 52.06 | 75.14 | 0 | 833 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 9.70 | 51.22 | 0 | 449 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 13.58 | 20.18 | 0 | 1994 |
ಕೆ.ಆರ್.ಎಸ್ (KRS Dam) | 38.04 | 49.45 | 17.08 | 35.04 | 433 | 501 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 47.52 | 83.57 | 57 | 2345 |
ಕಬಿನಿ ಜಲಾಶಯ (Kabini Dam) | 696.13 | 19.52 | 12.99 | 12.44 | 82 | 500 |
ಭದ್ರಾ ಜಲಾಶಯ (Bhadra Dam) | 657.73 | 71.54 | 32.10 | 59.37 | 244 | 244 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 33.70 | 30.80 | 0 | 126 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 14.8^6 | 22.35 | 148 | 230 |
ವರಾಹಿ ಜಲಾಶಯ (Varahi Dam) | 594.36 | 31.10 | 09.29 | 12.77 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.42 | 3.29 | 218 | 200 |
ಸೂಫಾ (Supa Dam) | 564.00 | 145.33 | 65.15 | 83.20 | 184 | 3824 |
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.