ಇತ್ತೀಚಿನ ಸುದ್ದಿರಾಜ್ಯಸುದ್ದಿ

ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ : ಡಿ ಕೆ ಶಿವಕುಮಾರ್​

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ ಸಭೆ ನಡೆಸಿದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪೂರ್ವಸಿದ್ಧತೆ ಸಭೆ ನಡೆಸಿ ಮಾತನಾಡಿದರು. ಈ ವೇಳೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್, ಸ್ಥಳೀಯ ಮುಖಂಡ ಉಪಸ್ಥಿತರಿದ್ದರು.

ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ ಸಭೆ ನಡೆಸಿದರು. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್, ಮಾಜಿ ಶಾಸಕ ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಕೆಪಿಸಿಸಿ ವಕ್ತರ ಶಂಕರ್ ಗುಹಾ, ಮತ್ತಿತರರು ಉಪಸ್ಥಿತರಿದ್ದರು.

ಬಸವನಗುಡಿ ವಿಧಾನಸಭಾ ವ್ಯಾಪ್ತಿಯ ವಿವಿಧ ವಾರ್ಡ್​ಗಳಲ್ಲಿ ಕಾಂಗ್ರೆಸ್​ಗೆ ಅಗತ್ಯ ಇರುವ ಪೋಷಣೆ ಹಾಗೂ ಗೆಲ್ಲುವ ಅವಕಾಶಗಳ ಕುರಿತು ನಾಯಕರು ವಿವರ ನೀಡಿದರು. ಇದರ ಜೊತೆ ಸ್ವಾತಂತ್ರ್ಯೋತ್ಸವ ನಡಿಗೆ ಬಳಿಕ ಬೃಹತ್ ಸಮಾವೇಶ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು, ಅದರ ಸಿದ್ಧತೆ ಸೇರಿದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಾಲೋಚಿಸಿದರು.

ಬಿಬಿಎಂಪಿ ಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ, ಬಿಜೆಪಿಯ ಮತ್ತೊಂದು ಹೆಸರೇ ಮೋಸ’

ಬಿಬಿಎಂಪಿ ವಾರ್ಡ್​​ಗಳ ಮೀಸಲಾತಿಯನ್ನು ಬಿಜೆಪಿ ಹಾಗೂ ಅವರ ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಪ್ರಕಟಿಸಲಾಗಿದೆ. ಬಿಜೆಪಿನೇ ಮೋಸ, ಬಿಜೆಪಿಗೆ ಮತ್ತೊಂದು ಹೆಸರೇ ಮೋಸ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಗೆ ನಾವು ಸಿದ್ದವಾಗಿದ್ದೇವೆ. ಆದರೆ, ಬಿಬಿಎಂಪಿ ಮೀಸಲಾತಿ ಪ್ರಕಟಣೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ, ಮಹಿಳೆಯರಿಗೂ ಅನ್ಯಾಯ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸುವ ಹುನ್ನಾರವಿದು ಎಂದು ಕಿಡಿಕಾರಿದರು.

ಈ ಮೀಸಲಾತಿ ವಿಷಯವಾಗಿ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ. ಕಾನೂನಾತ್ಮಕ ಹೋರಾಟ ಕೂಡ ಮಾಡುತ್ತೇವೆ. ಬಿಜೆಪಿ ಸರ್ಕಾರ ಮಾಡುವ ಆದೇಶಗಳ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button