ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ..!
ಬೆಂಗಳೂರು: ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.
ಮಂಡ್ಯ: ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.