ಆರೋಗ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಮನೆ ಮನೆ ಸಮೀಕ್ಷೆ ನಡೆಸಲು ಬಿಬಿಎಂಪಿ ನಿರ್ಧಾರ

ಮಳೆಗಾಲ ಶುರುವಾಗುತ್ತಿದ್ದಂತೆ ವೈರಲ್ ಜ್ವರ, ಡೆಂಗ್ಯೂ, ಚಿಕನ್ ಗುನ್ಯ ಮುಂತಾದ ರೋಗಗಳು ಕಾಣಿಸಿಕೊಳ್ಳತೊಡಗುತ್ತವೆ. ಕರ್ನಾಟಕದಲ್ಲಿ ಮಳೆಗಾಲ ಶುರುವಾಗಿ 3 ತಿಂಗಳು ಕಳೆದಿವೆ. ಇದೀಗ ರಾಜ್ಯದಲ್ಲಿ ಕೊವಿಡ್ ಜೊತೆಗೇ ಡೆಂಗ್ಯೂ ಕೇಸುಗಳು ಹೆಚ್ಚಾಗುತ್ತಿವೆ. ಸೆಪ್ಟೆಂಬರ್ ಮೊದಲ 2 ವಾರಗಳಲ್ಲಿ ಬೆಂಗಳೂರಿನಲ್ಲಿ 200ಕ್ಕೂ ಹೆಚ್ಚು ಡೆಂಗ್ಯೂ ಕೇಸುಗಳು ಪತ್ತೆಯಾಗಿತ್ತು. ಸೊಳ್ಳೆಯಿಂದ ಹರಡುವ ಡೆಂಗ್ಯೂದಿಂದ ಇದ್ದಕ್ಕಿದ್ದಂತೆ ಜ್ವರ ಶುರುವಾಗುತ್ತದೆ, ಗಂಟು ನೋವು ಕಾಣಿಸಿಕೊಳ್ಳುತ್ತದೆ. ಈವರೆಗೂ ಬೆಂಗಳೂರಿನಲ್ಲಿ 575 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ಡಾ. ಬಿ.ಕೆ. ವಿಜೇಂದ್ರ ಮಾಹಿತಿ ನೀಡಿದ್ದು, ಮನೆ ಮನೆ ಸಮೀಕ್ಷೆ ನಡೆಸುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ 1,17,036 ಮನೆಗಳಿಗೆ ಭೇಟಿ ನೀಡಲಾಗಿದೆ. ಸಮೀಕ್ಷೆ ಮುಂದುವರೆಯುತ್ತಿದೆ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button