ಇತ್ತೀಚಿನ ಸುದ್ದಿರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭಾರೀ ಮಳೆ ಎಚ್ಚರಿಕೆ; ರಾಜ್ಯದ ಕೆಲವು ಜಿಲ್ಲೆಗಳಲ್ಲೂ ಸೋಮವಾರ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಸೋಮವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸುವ ಕುರಿತು ಎಚ್ಚರಿಕೆ ನೀಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಅಷ್ಟೇ ಅಲ್ಲದೇ ರಾಮನಗರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಮುಂಜಾನೆ ಮಳೆ ಆರಂಭವಾಗಿದೆ.

ಭಾನುವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ದಕ್ಷಿಣ ರಾಜ್ಯ, ಕರಾವಳಿಯಲ್ಲಿ ಮಳೆ

“ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. “ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ” ಎಂದು ಪ್ರಕಟಣೆ ತಿಳಿಸಿದೆ.

ಗರಿಷ್ಠ ತಂಪಾದ ತಾಪಮಾನ ದಾಖಲು

ಬೆಂಗಳೂರಿನಲ್ಲಿ ಮಳೆಯಿಂದಾಗಿ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದ್ದು ಆಗಿದೆ. ಮೇ ತಿಂಗಳಿನಲ್ಲಿ ಅತ್ಯಂತ ತಂಪಾದ ತಾಪಮಾನವು ಸಿಲಿಕಾನ್ ಸಿಟಿಯಲ್ಲಿ ವರದಿಯಾಗಿದೆ. ಐಟಿ ನಗರಿಯಲ್ಲಿನ ತಂಪು ವಾತಾವರಣಕ್ಕೆ ಜನರು ಥರಥರ ನಡುಗಿ ಹೋಗಿದ್ದಾರೆ. ಒಂದು ದಶಕದಲ್ಲಿ ಅತ್ಯಂತ ಚಳಿಯ ದಿನವನ್ನೂ ವರದಿ ಮಾಡಿರುವುದು ಆಗಿದೆ. ಮೇ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ ಅವಾಂತರ ಸಹ ಸೃಷ್ಟಿ ಮಾಡಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆ ಸೃಷ್ಟಿಸಿದ ಅವಾಂತರ

ಭಾರತದ ಐಟಿ ರಾಜಧಾನಿಯಲ್ಲಿ ಸರ್ಕಾರದ ಯೋಜನೆಗಳು ಮತ್ತು ಮೂಲಸೌಕರ್ಯಗಳು ಎಷ್ಟರ ಮಟ್ಟಿಗೆ ಅಸಮರ್ಪಕವಾಗಿವೆ ಎನ್ನುವುದನ್ನು ಅಕಾಲಿಕ ಮಳೆಯು ಮತ್ತೊಮ್ಮೆ ಸಾಬೀತುಪಡಿಸಿತು. ಮೇ ತಿಂಗಳಿನಲ್ಲಿ ಸುರಿದ ಮಳೆಯು ಸಿಲಿಕಾನ್ ಸಿಟಿಯಲ್ಲಿ ಸೃಷ್ಟಿಸಿದ ಅವಾಂತರಗಳು ಒಂದೆರೆಡಲ್ಲ. ನಗರದ ಹಲವಾರು ಅಪಾರ್ಟ್‌ಮೆಂಟ್‌ಗಳು ಮತ್ತು ಮನೆಗಳು ಜಲಾವೃತಗೊಂಡವು, ವ್ಯಾಪಾರಗಳು ಮತ್ತು ಜೀವನೋಪಾಯ ಅಂಗಡಿಗಳು ಮತ್ತು ಮಳಿಗೆಗಳಿಗೆ ನೀರು ನುಗ್ಗಿತು. ರಸ್ತೆಗಳು ಜಲಾವೃತಗೊಂಡಿದ್ದರೆ, ಕೆಲವು ಕಡೆಗಳಲ್ಲಿ ವಾಹನಗಳೂ ಮುಳುಗಿ ಹೋಗಿದ್ದವು. ಸಂಜೆ ಹೊತ್ತಲ್ಲಿ ಸುರಿಯುವ ಮಳೆಯಿಂದ ನಗರದಲ್ಲಿ ವಾಹನ ಸವಾರರು ಪ್ರತಿನಿತ್ಯ ಪರಿತಪಿಸುವಂತಾ ವಾತಾವರಣವನ್ನು ಮಳೆರಾಯ ಸೃಷ್ಟಿಸಿದ್ದನು.

Related Articles

Leave a Reply

Your email address will not be published. Required fields are marked *

Back to top button