ಇತ್ತೀಚಿನ ಸುದ್ದಿ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಂಪಿಸಿದ ಭೂಮಿ..! ಆತಂಕದಲ್ಲಿ ಜನರು
ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ್ದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.ಶುಕ್ರವಾರದಂದು ಸುಮಾರು 11.50 ಮತ್ತು 12-15 ರ ಸುಮಾರಿಗೆ ಭೂಕಂಪನವಾಗಿದೆ ಎನ್ನಲಾಗಿದೆ. ನಗರದ ಹೆಮ್ಮಗಿಪುರ, ಕೆಂಗೇರಿ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ ಕಗ್ಗಲಿಪುರದ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಬಗ್ಗೆ ಸ್ಥಳಿಯರು ದೂರು ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
ಆದರೆ ಭೂಕಂಪ ಸೂಚಕ ಯಂತ್ರದಲ್ಲಿ ಈ ಮೇಲಿನ ಸಮಯದಲ್ಲಿ ಭೂಕಂಪನ ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.