ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ, 1.8 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

ಪೊಲೀಸರ ಪ್ರಕಾರ, ಅವರಿಬ್ಬರೂ ಪೊಲೀಸ್ ಠಾಣೆ ವ್ಯಾಪ್ತಿಯ ಎಂಆರ್ ಲೇಔಟ್‌ನ ರಾಣಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧಾರದ ಮೇಲೆ, ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ದೇವನಹಳ್ಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.ಪೊಲೀಸರ ಪ್ರಕಾರ, ಅವರಿಬ್ಬರೂ ಪೊಲೀಸ್ ಠಾಣೆ ವ್ಯಾಪ್ತಿಯ ಎಂಆರ್ ಲೇಔಟ್‌ನ ರಾಣಿ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧಾರದ ಮೇಲೆ, ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 3 ಕೆಜಿ 200 ಗ್ರಾಂ ಗಾಂಜಾ, ಎರಡು ಮೊಬೈಲ್ ಫೋನ್‌ಗಳು, ಒಂದು ತೂಕದ ಯಂತ್ರ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1,80,000 ರೂ. ಎಂದು ಅಂದಾಜಿಸಲಾಗಿದೆ.
ವಿಚಾರಣೆ ಸಮಯದಲ್ಲಿ, ಬಂಧಿತ ಇಬ್ಬರು ಆರೋಪಿಗಳು ತಮಗೆ ಮಾರಾಟ ಮಾಡಲು ಗಾಂಜಾ ಪೂರೈಸುತ್ತಿದ್ದ ಮತ್ತೊಬ್ಬ ಸಹಚರನ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಮಾರ್ಚ್ 8 ರಂದು ನ್ಯೂ ಗುರಪ್ಪನಪಳ್ಳಿಯ ಬಿಟಿಎಂ ಲೇಔಟ್‌ನಲ್ಲಿರುವ ಮನೆಯಿಂದ ಮತ್ತೋರ್ವವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನನ್ನು ವಿಚಾರಿಸಿದಾಗ ಪ್ರಕರಣದಲ್ಲಿ ತಾನು ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದು, ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ನಿಷೇಧಿತ ಗಾಂಜಾವನ್ನು ಖರೀದಿಸಿರುವುದಾಗಿ ಹೇಳಿದ್ದಾನೆ.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ