ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka Rains) ಕೆಲ ಜಿಲ್ಲೆಗಳಲ್ಲಿ ಮಳೆಯ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಇವತ್ತು ಸಹ ಮಳೆಯ ಸಿಂಚನ ಮುಂದುವರಿಯಲಿದೆ. ದಿನವಿಡೀ ಜಿಟಿ ಜಿಟಿ ಮಳೆಗೆ ಬೆಂಗಳೂರಿನ ಜನತೆ ಹೈರಾಣಾಗಿದ್ದಾರೆ. ಇತ್ತ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ (Rainfall) ಸಾಧ್ಯತೆಗಳಿವೆ. ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೆ ಮಳೆಯ ಸುಳಿಯಲ್ಲಿ ಸಿಲುಕಿದ್ದು,ರಕ್ಷಣಾ ಕಾರ್ಯ ಮುಂದುವರಿದಿದೆ. ಮತ್ತೊಂದು ಕಡೆ ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿಯಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಅರಬ್ಬಿ ಸಮುದ್ರ ತೀರದ ಪ್ರದೇಶಗಳಲ್ಲಿ ಮಳೆ ಆರಂಭಗೊಂಡಿದ್ದು, ಮಹಾರಾಷ್ಟ್ರದ (Maharashtra Rain) ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
ಇವತ್ತು ಬೆಂಗಳೂರಿನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚಿಕ್ಕಬಳ್ಳಾಪುರ 23-16, ಮೈಸೂರು 24-19, ಹಾಸನ 23-17, ಮಂಗಳೂರು 30-24, ಉಡುಪಿ 31-24, ಉತ್ತರ ಕನ್ನಡ 30-19, ಶಿವಮೊಗ್ಗ 28-19, ದಾವಣಗೆರೆ 29-19, ತುಮಕೂರು 24-18 ತಾಪಮಾನ ದಾಖಲಾಗಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದ್ದು, ಬೆಳಗಿನ ಜಾವ ಶೀತಗಾಳಿ ಸುಳಿಯಲಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗನಲ್ಲಿ ಒಣ ಹವೆ ಮುಂದುವರಿಯಲಿದೆ.