ದೇಶ

ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ವಿಎಚ್‌ಪಿ ಆಗ್ರಹ

ನವದೆಹಲಿ: ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಭಗವದ್ಗೀತೆಯ ಕಲಿಕೆ ಮತ್ತು ಕಲಿಸುವಿಕೆಯನ್ನು ಕಡ್ಡಾಯಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಗ್ರಹಿಸಿದೆ.

ಜನತೆಯಲ್ಲಿ ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿರುವುದನ್ನು ತಡೆಯಲು ಮತ್ತು ಸರ್ಕಾರಿ ಅಧಿಕಾರಿಗಳಲ್ಲಿ ಕರ್ತವ್ಯಪ್ರಜ್ಞೆ ಜಾಗೃತಿಗೊಳಿಸಲು ನಿಯಮಿತವಾಗಿ ಭಗವದ್ಗೀತೆಯನ್ನು ಪಠಣ ಮಾಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ವಿಎಚ್‌ಪಿ ಹೇಳಿದೆ.

ಇಂದು ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ವ್ಯವಸ್ಥೆ. ಹೀಗಾಗಿ ಶಿಕ್ಷಣದ ಎಲ್ಲ ಹಂತಗಳಲ್ಲಿ ಭಗವದ್ಗೀತೆಯನ್ನು ಕಡ್ಡಾಯಗೊಳಿಸಬೇಕು’ ಎಂದು ವಿಎಚ್‌ಪಿ ರಾಷ್ಟ್ರೀಯ ಕಾರ್ಯದರ್ಶಿ ಆಚಾರ್ಯ ರಾಧಾಕೃಷ್ಣ ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಶಿಕ್ಷಕರೂ ಭಗವದ್ಗೀತೆಯನ್ನು ಅಧ್ಯಯನ ಮಾಡುವಂತೆ ಮಾಡಬೇಕು. ಭಗವದ್ಗೀತೆಯ ಎಲ್ಲ 18 ಅಧ್ಯಾಯಗಳ ಬೋಧನೆ ಹಾಗೂ ಕಲಿಕೆಯನ್ನು ಶಿಕ್ಷಕರ ತರಬೇತಿ ಪಠ್ಯಕ್ರಮದ ಒಂದು ಭಾಗವಾಗಿ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಕರ್ತವ್ಯಪ್ರಜ್ಞೆಯನ್ನು ಬೆಳಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.‌

Related Articles

Leave a Reply

Your email address will not be published. Required fields are marked *

Back to top button