ಭರ್ಜರಿ ಶತಕ ಬಾರಿಸಿದ ಕೆಎಲ್ ರಾಹುಲ್
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೆಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ 245 ರನ್ ಕಲೆಹಾಕಿದೆ. ಸೌತ್ ಆಫ್ರಿಕಾ ಪರ ಕಗಿಸೊ ರಬಾಡ 5 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.ಸೆಂಚುರಿಯನ್ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.ಮೊದಲ ಇನಿಂಗ್ಸ್ನ 5ನೇ ಓವರ್ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಪರಿಣಾಮ ಟೀಮ್ ಇಂಡಿಯಾ 107 ರನ್ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಸೌತ್ ಆಫ್ರಿಕಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕನ್ನಡಿಗ ರನ್ಗಳಿಸುತ್ತಾ ಸಾಗಿದರು. ಅಲ್ಲದೆ ಮೊದಲ ದಿನದಾಟದಲ್ಲೇ ಅರ್ಧಶತಕ ಪೂರೈಸಿ ತಂಡಕ್ಕೆ ಆಸರೆಯಾಗಿ ನಿಂತರು.
4 / 7ಅಲ್ಲದೆ ಮೊದಲ ದಿನದಾಟದಲ್ಲಿ ಅಜೇಯ 70 ರನ್ ಬಾರಿಸಿ ಕೆಎಲ್ ರಾಹುಲ್ ತಂಡದ ಮೊತ್ತವನ್ನು 8 ವಿಕೆಟ್ ನಷ್ಟಕ್ಕೆ 208 ಕ್ಕೆ ತಂದು ನಿಲ್ಲಿಸಿದರು. 2ನೇ ದಿನದಾಟದಲ್ಲಿ ಸಿರಾಜ್ ಜೊತೆ ಇನಿಂಗ್ಸ್ ಆರಂಭಿಸಿದ ರಾಹುಲ್ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದರು.
ಇತ್ತ 9ನೇ ವಿಕೆಟ್ ಆಗಿ ಸಿರಾಜ್ ಹೊರ ನಡೆಯುತ್ತಿದ್ದರೆ ಅತ್ತ ರಾಹುಲ್ಗೆ ಶತಕ ಪೂರೈಸಲು 5 ರನ್ಗಳ ಅವಶ್ಯಕತೆಯಿತ್ತು. ಈ ವೇಳೆ ಪ್ರಸಿದ್ಧ್ ಕೃಷ್ಣ ಸಿಂಗಲ್ ರನ್ ತೆಗೆದುಕೊಂಡರು. ಈ ವೇಳೆ ಸ್ಟ್ರೈಕ್ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 133 ಎಸೆತಗಳಲ್ಲಿ ಶತಕ ಪೂರೈಸಿದರು.ಅಂತಿಮವಾಗಿ 137 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 101 ರನ್ ಬಾರಿಸಿ ಕೆಎಲ್ ರಾಹುಲ್ ಔಟಾದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ 245 ರನ್ಗಳಿಸಿ ಆಲೌಟ್ ಆಗಿದೆ.