ದೇಶ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,870 ಕೋವಿಡ್ ಪ್ರಕರಣ ಪತ್ತೆ, 378 ಮಂದಿ ಸಾವು
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,870 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,37,16,451ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆಪ್ಟೆಂಬರ್ 29) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಮಂಗಳವಾರ ದೇಶದಲ್ಲಿ 18,795 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ ಆರು ತಿಂಗಳ ಬಳಿಕ ಇದೇ ಮೊದಲ ಬಾರಿಗೆ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣ ವರದಿಯಾಗುತ್ತಿದೆ.
ಕಳೆದ 24ಗಂಟೆಗಳಲ್ಲಿ 378 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,47,751ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.