ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಇಂದಿರಾಗಾಂಧಿ ಅವರು ಮಾತ್ರ ಬಡವರ ಧ್ವನಿಯಾಗಿದ್ದರು: ಸಿ.ಲಕ್ಷ್ಮೀನಾರಾಯಣ್
ಮಾಲೂರು:
ಕ್ರಾಂತಿಕಾರಕ ಯೋಜನೆಗಳು, ದಿಟ್ಟ ನಿರ್ಧಾರಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಭಾರತದ ಮೊದಲ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ, ಭಾರತ ರತ್ನ ಇಂದಿರಾಗಾಂಧಿ ಅವರು ಮಾತ್ರ ಬಡವರ ಧ್ವನಿಯಾಗಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ್ ಹೇಳಿದರು.
ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಮಾಲೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾ.ಗೋ.ಮಧುಸೂದನ್ ಅವರ ಅಧ್ಯಕ್ಷತೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 107 ನೇ ಜಯಂತಿ ಆಚರಣೆ ಅಂಗವಾಗಿ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
1965ರಲ್ಲಿ ಯುದ್ಧ ನಡೆಯುತ್ತಿದ್ದಾಗ, ಭಾರತ-ಪಾಕಿಸ್ತಾನ ಇಂದಿರಾಗಾಂಧಿ ಅವರು ಶ್ರೀನಗರದ ಗಡಿ ಪ್ರದೇಶದಲ್ಲಿ ವಿಹಾರ ನಡೆಸಿದ್ದರು. ಪಾಕಿಸ್ತಾನಿ ದಂಗೆಕೋರರು ನಗರದ ಹತ್ತಿರಕ್ಕೆ ನುಸುಳಿ ಬಂದಿದ್ದಾರೆ ಎಂದು ಸೇನೆಗೆ ಎಚ್ಚರಿಕೆ ನೀಡಿದರೂ ಅದನ್ನು ಲೆಕ್ಕಿಸದೆ ಅವರು ಜಮ್ಮು ಮತ್ತು ದೆಹಲಿಗೆ ವಾಸ್ತವ್ಯ ಸ್ಥಳಾಂತರಿಸಲು ನಿರಾಕರಿಸಿ ಪಾಕಿಸ್ತಾನದ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆ ಎಂದರು. ಇಂದಿರಾ ಬಡವರ ಪರ ಇದ್ದರೂ ಎಂಬುದಕ್ಕೆ ಅವರು ರೂಪಿಸಿದ ಅನೇಕ ಕಾರ್ಯಕ್ರಮಗಳೇ ಸಾಕ್ಷಿ. ಈ ದೇಶದ ಪ್ರತಿಯೊಬ್ಬರಿಗೂ ಅನ್ನ ಆಶ್ರಯ ಬಟ್ಟೆ ದೊರೆಯಲಿ ಎಂದು ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಇಂದಿಗೂ ಆ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಇಂದಿರಾಗಾಂಧಿ ರವರ ಆಡಳಿತ ಸುವರ್ಣಯುಗ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ಮಧುಸೂದನ್, ಪುರಸಭಾ ಅಧ್ಯಕ್ಷೆ ಕೋಮಲ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ರಾಜಪ್ಪ, ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷ ಸಂತೇಹಳ್ಳಿ ನಾರಾಯಣಸ್ವಾಮಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುಹಮ್ಮದ್ ನಯೀಮ್, ಪುರಸಭಾ ಸದಸ್ಯ ಎನ್.ವಿ.ಮುರಳೀಧರ್, ನಾಗಪುರ ನವೀನ್, ಎಂ.ಎಂ.ತನ್ವೀರ್, ಶಬ್ಬೀರ್ ಉಲ್ಲಾ, ಜಗದೀಶ್ ರೆಡ್ಡಿ, ಮಾದನಹಟ್ಟಿ ಅಶೋಕ್, ಪ್ರಕಾಶ್, ಸ್ವಾಮಿ, ಮಂಜುನಾಥ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.