ಇತ್ತೀಚಿನ ಸುದ್ದಿರಾಜ್ಯ

ಮದ್ದೂರುಗ್ರಾಮಾಂತರ ಮಾನಸ ಶಿಕ್ಷಣ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ಶ್ಲಾಘನೀಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಗೌಡ ಹೇಳಿದರು.

ತಾಲೂಕಿನ ಬೆಸಗರಹಳ್ಳಿ ಗ್ರಾಮದ ಮಾನಸ ವಿದ್ಯಾಸಂಸ್ಥೆ ಹಾಗೂ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಮಾನಸೋತ್ಸವ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಪ್ರಸ್ತುತದಲ್ಲಿ ಸವಾಲಿನ ಕೆಲಸವಾಗಿದೆ. ಅಂತಹದರಲ್ಲಿ ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿಕೊಂಡರೆ ಮಾನಸ ವಿದ್ಯಾ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮನೆ ಮಾತಾಗಿದೆ ಎಂದು ಶ್ಲಾಘಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ ಅವರು ಮಾತನಾಡಿ, ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಮಾನಸ ವಿದ್ಯಾಸಂಸ್ಥೆ ತಾಲೂಕಿನಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿ ಮಾಡಿದೆ‌. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಕರಾಟೆ, ಸಂಗೀತ, ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುತ್ತಿರುವುದು ಹೆಮ್ಮೆಯ ಸಂಗತಿ. ಕಡಿಮೆ ಶುಲ್ಕದಲ್ಲಿ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಾನಸ ವಿದ್ಯಾಸಂಸ್ಥೆ ಗ್ರಾಮೀಣ ಭಾಗದ ಶಿಕ್ಷಣ ಸಂಜೀವಿನಿಯಾಗಿದೆ ಎಂದರು.

ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಹಾಡುಗಳಿಗೆ ವಿಭಿನ್ನ ನೃತ್ಯ ಮಾಡುವ ಮೂಲಕ ಸಭಿಕರ ಗಮನ ಸೆಳೆದರು. ಸಾವಿರಾರು ಮಂದಿ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವ ಮೂಲಕ ಮಾನಸೋತ್ಸವವನ್ನು ಸಾಕ್ಷಿಕರಿಸಿದರು.

ಸಂಸ್ಥೆಯ ಅಧ್ಯಕ್ಷ ವಿ.ಕೆ. ಜಗದೀಶ್ ಅವರು ಮಾತನಾಡಿ, ನಮ್ಮ ಸಂಸ್ಥೆಯಿಂದ ಅತ್ಯಧಿಕ ಅಂಕಗಳಿಸಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ನಗದು ಪುರಸ್ಕಾರವನ್ನು ನೀಡಲಾಗುವುದು ಎಂದು ಘೋಷಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್. ಶಿವರಾಮೇಗೌಡ, ರಾಜ್ಯ ವಕೀಲರ ಪರಿಷತ್ ಸದಸ್ಯ ಮಧುಸೂದನ್, ನಿವೃತ್ತ ಪ್ರಾಂಶುಪಾಲ ಎ.ಎಸ್. ರವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ವಿಷಯ ಪರವೀಕ್ಷಕ ನಂಜರಾಜು, ಶಿಕ್ಷಣ ಸಂಯೋಜಕ ಲೋಕೇಶ್, ಮಾನಸ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಕೆ. ಜಗದೀಶ್, ಕಾರ್ಯದರ್ಶಿ ಎಚ್.ಪಿ. ನಾಗರಾಜು, ಶೈಕ್ಷಣಿಕ ಸಲಹೆಗಾರ ಎಚ್‌.ಪಿ. ನಿಂಗರಾಜು, ಪ್ರಾಂಶುಪಾಲರಾದ ಟಿ.ಸಿ. ಪ್ರವೀಣ್ ಕುಮಾರ್, ಆರ್. ಪಲ್ಲವಿ, ಮುಖ್ಯ ಶಿಕ್ಷಕರಾದ ಬಿ.ಎಂ. ಬಸವರಾಜು, ಎನ್. ಶರತ್, ಬಿ.ವೈ. ರಮೇಶ್, ಕಲಾವತಿ ಸೇರಿದಂತೆ ಇತರರಿದ್ದರು.

ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಮಾನಸೋತ್ಸವ-2024 ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button