ಭಾರತ ಚಿತ್ರರಂಗದ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ (Super Star Rajinikanth) ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್(Discharge) ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್ ಅವರನ್ನು ಕಾವೇರಿ(Kaveri) ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇತ್ತೀಚೆಗಷ್ಟೇ ರಜನಿ ಸಣ್ಣ ಶಸ್ತ್ರಚಿಕಿತ್ಸೆ ಒಂದಕ್ಕೆ ಒಳಗಾಗಿದ್ದರು. ಬಳಿಕ ಸೂಪರ್‌ಸ್ಟಾರ್ ರಜನಿಕಾಂತ್ ಚೇತರಿಸಿಕೊಂಡಿದ್ದರು. ಆದರೆ ರೂಟಿನ್ ಚೆಕ್ಅಪ್(Routine Checkup)ಗೆ ಬಂದಾಗ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್(M.K Stalin) ಅವರು ಕೂಡ ರಜನಿಕಾಂತ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ರಜನಿಕಾಂತ್ ಆರೋಗ್ಯವಾಗಿದ್ದಾರೆ, ಆತಂಕ ಪಡುವ ಯಾವ ಅಗತ್ಯವೂ ಇಲ್ಲ ಎಂದು ವೈದ್ಯರು ತಿಳಿಸಿದ್ದರು. ಈ ವಿಚಾರ ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ.
ರೂಟಿನ್ ಹೆಲ್ತ್ ಚೆಕ್ಅಪ್ ಎಂದಿದ್ದ ಕುಟುಂಬಸ್ಥರು
70 ವರ್ಷದ ರಜನಿಕಾಂತ್ ಅವರನ್ನು ಗುರುವಾರ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನು ಕೇಳಿ ಅವರ ಅಭಿಮಾನಿಗಳ ಮನದಲ್ಲಿ ಆತಂಕ ಮೂಡಿತ್ತು. ಆದರೆ ಅವರ ಕುಟುಂಬಸ್ಥರು ಪ್ರತಿ ವರ್ಷ ಮಾಡಿಸುವ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿದೆ ಎಂದು ಹೇಳಿದ್ದರು. ಶನಿವಾರ ಕಾವೇರಿ ಆಸ್ಪತ್ರೆ ಬಿಡುಗಡೆ ಮಾಡಿದ್ದ ಹೆಲ್ತ್ ಬುಲೆಟಿನ್ನಲ್ಲಿ ರಜನಿಕಾಂತ್ ಕೊಂಚ ಆಯಾಸಿಂದ ಬಳಲುತ್ತಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು ಎಂದು ತಿಳಿಸಲಾಗಿತ್ತು. ರಜನಿಕಾಂತ್ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡ ನಂತರ ಮನೆಗೆ ಮರಳಿದ್ದಾರೆ.