ರಾಜ್ಯ
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ
ಬೆಂಗಳೂರು: ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾಗಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ.
ಇಬ್ಬರಿಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಈ ಇಬ್ಬರೂ, ಅವರು ಮುಖ್ಯಮಂತ್ರಿಯಾಗಿದ್ದಾಗಲೂ ರಾಜಕೀಯ ಕಾರ್ಯದರ್ಶಿ ಆಗಿದ್ದರು.