ವಿದೇಶ

ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರ ಸ್ವಾಗತಿಸಿದ ಅಮೆರಿಕದ ಕಾಂಗ್ರೆಸ್ ಸದಸ್ಯ

ವಾಷಿಂಗ್ಟನ್: ಭಾರತದಲ್ಲಿ ಮೂರು ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸಿರುವುದನ್ನು ಅಮೆರಿಕದ ಕಾಂಗ್ರೆಸ್ ಸದಸ್ಯ ಆಂಡಿ ಲೆವಿನ್ (US Congressman Andy Levin) ಸ್ವಾಗತಿಸಿದ್ದಾರೆ.

ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ನಂತರ ಭಾರತದಲ್ಲಿ ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸಲಾಗಿದೆ. ಕಾರ್ಮಿಕರು, ರೈತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ರೆ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಸೋಲಿಸಬಹುದು ಮತ್ತು ಪ್ರಗತಿಯನ್ನು ಸಾಧಿಸಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಗುರುನಾನಕ್​ ದಿನಾಚರಣೆ (guru nanak jayanti) ನಿಮಿತ್ತ ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ (Modi repeals controversial farm laws ), “ಇಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ, ನಾವು ಎಲ್ಲ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ.

ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನ ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ. ಹೋರಾಟ ಮಾಡುತ್ತಿರುವ ಎಲ್ಲ ರೈತರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿ, ಹೊಸ ಜೀವನ ಆರಂಭಿಸಲು ಒತ್ತಾಯಿಸುತ್ತೇನೆ” ಎಂದು ರೈತರಲ್ಲಿ ಮನವಿ ಮಾಡಿಕೊಂಡರು.

Related Articles

Leave a Reply

Your email address will not be published. Required fields are marked *

Back to top button