ಕಳೆದ ಕೆಲ ದಿನಗಳಿಂದ ಕರ್ನಾಟಕವನ್ನು ಬಿಟ್ಟುಬಿಡದೇ ಕಾಡಿದ ಮಳೆ(Rain) ಕೊಂಚ ಬಿಡುವು ಕೊಟ್ಟಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳು ,ಜನರು ಮಳೆಯ ಅಬ್ಬರಕ್ಕೆ ನಲುಗಿಹೋಗಿದ್ದರು. ಆದರೆ ಇಂದು ಮಳೆ ನೀಡಿರುವ ಗ್ಯಾಪ್ನಿಂದ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 30ರವೆಗೆ ಮಳೆಯಾಗುವ(Rainfall) ಸಾಧ್ಯತೆ ಹೆಚ್ಚಿತ್ತು. ಆದರೆ ಹವಮಾನ ಬದಲಾವಣೆಯಿಂದ(Change of Weather) ಇಂದು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ ಇಂದು ಹವಮಾನ ಇಲಾಖೆ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಇದೇ ವಾತಾವರಣ ಭಾನುವಾರ(Sunday)ದ ವರೆಗೂ ಮುಂದುವರೆಯಲಿದೆ. ಆದರೆ ಬೆಂಗಳೂರಿನ(Bengaluru)ಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಸಣ್ಣ ಮಳೆಯಾಗುತ್ತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ ಬೆಂಗಳೂರಿನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಇರಲಿದೆ. ಇಂದು ಸಂಜೆ ವೇಳೆಗೆ ಮಳೆರಾಯ ಎಂಟ್ರಿಕೊಡುವ ಸಾಧ್ಯತೆಯಿದೆ. ನಾಳೆಯೂ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚಿದೆ
ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್29 ಮಳೆಯ ಅಬ್ಬರ , ಕಡಿಮೆ. ಆದರೆ ಅಕ್ಟೋಬರ್ 30, ಅಕ್ಟೋಬರ್ 31, ನವೆಂಬರ್ 1ರಂದು ಈ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇದ್ದು, ಮಳೆಯ ಸಾಧ್ಯತೆಗಳಿವೆ. ಹುಬ್ಬಳ್ಳಿ-ಧಾರವಾಡದದಲ್ಲಿ ಬೇಸಿಗೆ ವಾತಾವರಣ ಇರಲಿದೆ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ ,ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.