ದೇಶಸುದ್ದಿ

ಯೂತ್ ಕಾಂಗ್ರೆಸ್ಸಿನಿಂದ ದೆಹಲಿಯಲ್ಲಿ ಪಂಜಿನ ಮೆರವಣಿಗೆ, ಕೇಂದ್ರ ಸಚಿವರ ವಜಾಕ್ಕೆ ಆಗ್ರಹ..!

ನವದೆಹಲಿ, ಅ. 13: ಉತ್ತರಪ್ರದೇಶದ (Uttar Pradesh) ಲಖೀಂಪುರ್​ ಖೇರಿಯಲ್ಲಿ (Lakhimpur Kheri) ಇದೇ ಅಕ್ಟೋಬರ್​ 3ರಂದು ನಡೆದಿದ್ದ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ (Ajay Mishra) ಅವರ ಪುತ್ರ ಆಶೀಶ್​ ಮಿಶ್ರಾ (Ashish Mishra) ಕಾರಣಕರ್ತನಾಗಿದ್ದು ಕೂಡಲೇ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ (Union Cabinet) ವಜಾ ಮಾಡಬೇಕು.

ಲಖೀಂಪುರ್ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. (All India Youth Congress President Srinivas BV) ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ (Torch Light Parade) ಮಾಡಲಾಯಿತು.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ., ದೇಶದಲ್ಲಿ ಅನ್ನದಾತನಿಗೆ ಕಿರುಕುಳ ನೀಡುವುದು ಪ್ರಧಾನಿ ನರೇಂದ್ರ ಮೋದಿ (Narendara Modi) ನೇತೃತ್ವದ ಕೇಂದ್ರ ಸರ್ಕಾರದ ನೀತಿ ಎಂದು ತೋರುತ್ತದೆ‌. ಇದು ವಿಫಲವಾದ ತಂತ್ರ. ರೈತರು ಈಗ ಬಿಜೆಪಿಯ ಕುಟಿಲ ನೀತಿ ಮತ್ತು ತಂತ್ರಗಳನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕ್ಷಮಿಸಲಾಗದ ಕೃತ್ಯ ನಡೆಸಿರುವುದು ಮತ್ತು ರೈತರನ್ನು ನಿರ್ದಯವಾಗಿ ಹತ್ಯೆ ಮಾಡಿರುವುದು ಭಾರತದ ಆತ್ಮವನ್ನು ಕದಡಿದೆ. ಲಖಿಂಪುರ್ ಖೇರಿ ಘಟನೆಯಲ್ಲಿ ಬಿಜೆಪಿ ಸರ್ಕಾರದ ವರ್ತನೆ ಮೊದಲಿಗಿಂತಲೂ ಅನುಮಾನಾಸ್ಪದವಾಗಿದೆ. ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಸತ್ಯ ಏನು ಎಂಬುದು ಎಲ್ಲರಿಗೂ ತಿಳಿದಿದೆ. ಸರ್ಕಾರದ ಲಕ್ಷಗಟ್ಟಲೆ ಪ್ರಯತ್ನಗಳ ನಂತರವೂ ರೈತರ ನ್ಯಾಯದ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button