ಇತ್ತೀಚಿನ ಸುದ್ದಿ
ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ ಘೋಷಣೆ….!
ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಾಸನದಲ್ಲಿ ಮಾತನಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.
ಕುಟುಂಬದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.