ರಾಜ್ಯಸುದ್ದಿ

ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತದಿಂದಾಗಿ ನವೆಂಬರ್ 11 ರಿಂದ 13 ರವೆರೆಗೆ 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆ(Rainfall)ಯಾಗಲಿದೆ. ನವೆಂಬರ್ 11 ರಿಂದ ಮೂರು ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುವ (Karnataka Rains) ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ನವೆಂಬರ್ 10 ರಿಂದ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡ್ಮೂರು ದಿನ ಇದೇ ಹವಾಮಾನ ಮುಂದುವರಿಯಲಿದೆ. ಮಂಗಳವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ  ಹಲವು  ಭಾಗಗಳಲ್ಲಿ ಮಳೆಯಾಗಿದೆ. ಸೋಮವಾರದಿಂದ ಮಂಗಳವಾದವರೆಗೆ ಜಿಲ್ಲೆಯಲ್ಲಿ 15.1 ಮಿ.ಮೀ.ನಷ್ಟು  ಮಳೆಯಾಗಿದೆ.

ಬಂಟ್ವಾಳ, ಮಂಗಳೂರು, ಮೂಡಬಿದಿರೆ, ಕಡಬ, ಸುಳ್ಯ ಹಾಗೂ ಪುತ್ತೂರು ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿವೆ. ಮಂಗಳವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ನಾಪೋಕ್ಲು ಭಾಗದಲ್ಲಿ ನಾಲ್ಕು ಸೆಂ.ಮೀ.ನಷ್ಟು ಮಳೆಯಾಗಿರೋದು ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಕಾಲಿಕ ಮಳೆಗೆ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕಟಾವುಗೆ ಬಂದಿದ್ದ ಬೆಳೆ ಮಳೆಯ ಹೊಡೆತಕ್ಕೆ ಸಂಪೂರ್ಣ ನೆಲೆ ಕಚ್ಚಿದೆ. ಸೋಮವಾರ ಕಳಸ ತಾಲೂಕಿನ ವ್ಯಾಪಕ ಮಳೆಯಾಗಿರುವ ಪರಿಣಾಮ ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು.

ಚಿಕ್ಕಮಗಳೂರು ತಾಲೂಜಿನ ಐದಳ್ಳಿ ಗ್ರಾಮದ ರಸ್ತೆ ಮೇಲೆ ಸುಮಾರು ಮೂರು ಅಡಿಗೂ ಎತ್ತರದಲ್ಲಿ ನೀರು ಹರಿದಿತ್ತು, ರಸ್ತೆ ದಾಟಲಾರದೇ ಗ್ರಾಮಸ್ಥರು ಪರದಾಟ ನಡೆಸಿದರು. ಪ್ರತಿಬಾರಿಯೂ ಮಳೆಯಾದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಯಾರೂ ಸಮಸ್ಯೆಗೆ ಪರಿಹಾರ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೊಚ್ಚಿ ಹೋದ ಸೇತುವೆ

ಭಾರೀ ಮಳೆಗೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಕಾಲು ಸೇತುವೆ ಕೊಚ್ಚಿ ಹೋದ ಪರಿಣಾಮ ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ.

Related Articles

Leave a Reply

Your email address will not be published. Required fields are marked *

Back to top button