ಇತ್ತೀಚಿನ ಸುದ್ದಿಸುದ್ದಿ
ಲೋಕಾಯುಕ್ತ ಬಲೆಗೆ ಬಿದ್ದ PDO ಪ್ರಭಾರ ಲಂಚ ಸ್ವೀಕರಿಸುವಾಗ

ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
ಕೆ.ಶೆಟ್ಟಹಳ್ಳಿ ಪ್ರಭಾರ ಪಿಡಿಒ ದಯಾನಂದ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಖಾತೆ ಮಾಡಿಸಿಕೊಡಲು ಅಶ್ವಥ್ ಎಂಬುವವರ ಬಳಿ ದಯಾನಂದ್ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ 12 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿಯಾಗಿದ್ದು ದಯಾನಂದ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ನ್ಯೂಸ್10ಕನ್ನಡ ರಿಪೋರ್ಟರ್ – ಸುನಿಲ್ ಗೌಡ 🖋️