ರಾಜಕೀಯ
Trending

ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರ; ಸುಪ್ರೀಂ ಕದ ತಟ್ಟಲು ತಮಿಳುನಾಡು ಸರ್ಕಾರ ನಿರ್ಧಾರ

ಚೆನ್ನೈ: ಲೋಕಸಭೆಯಲ್ಲಿ ಬುಧವಾರ(ಏ.2) ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ಇಂದು (ಏ.3)ರಂದು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್‌ ತಮ್ಮ ಪಕ್ಷ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ.

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಮುಸ್ಲಿಂ ಸಂಘಟನೆಗಳಲ್ಲಿ ಕೆಲವು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ತಮಿಳುನಾಡು ಸರ್ಕಾರ ಲೋಕಸಭೆಯಲ್ಲಿ ಮಸೂದೆ ಅಂಗೀಕಾರ ವಿರೋಧಿಸಿ ವಿಧಾನಸಭೆಯಲ್ಲಿ ಕಪ್ಪು ಪಟ್ಟಿ ಧರಿಸುವ ಮೂಲಕ ಕಲಾಪಕ್ಕೆ ಹಾಜರಾಗಿ ಪ್ರತಿಭಟಿಸಿದರು.

“ವಕ್ಫ್‌ ಆಸ್ತಿ ವಿಚಾರವಾಗಿ ತಮಿಳುನಾಡು ಇದರ ವಿರುದ್ಧ ಹೋರಾಡಾಲಿದೆ. ಈ ಹೋರಾಟದಲ್ಲಿ ನಮಗೆ ಜಯ ಸಿಗಲಿದೆ. ತಮಿಳುನಾಡು ವಿಧಾನಸಭೆಯು ಮಾರ್ಚ್ 27ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ವಕ್ಫ್‌ ತಿದ್ದುಪಡಿ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಕೆಡುವುತ್ತದೆ. ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರಲಿದೆ. ಲವೇ ಕೆಲವು ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ನಸುಕಿನ ಜಾವ 2 ಗಂಟೆಗೆ ಮಸೂದೆಯನ್ನು ಅಂಗೀಕರಿಸುವುದು ಸಂವಿಧಾನದ ಮೇಲೆ ದಾಳಿ ನಡೆಸಿದಂತೆ.ನಾವು ಕಾನೂನು ಕ್ರಮಗಳ ಮೂಲಕ ಮಸೂದೆ ಹಿಂಪಡೆಯುವಂತೆ ಮಾಡುತ್ತೇವೆಎಂದು ಸ್ಟಾಲಿನ್‌ ಕಲಾಪದಲ್ಲಿ ಹೇಳಿದರು.”ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು” ಎಂದು ಹೇಳಿದರು.

ಲೋಕಸಭೆಯಲ್ಲಿ ಅಂಗೀಕರಿಸಲಾದ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮಾತನಾಡಿ, “ನಾವು ವಕ್ಫ್‌ ಮಸೂದೆಯನ್ನು ವಿರೋಧಿಸುತ್ತಿದ್ದೇವೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಈಗಾಗಲೇ ಅದರ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದಾರೆ” ಎಂದು ಹೇಳಿದರು.

ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಇಂದು ರಾಜ್ಯಸಭೆಯಲ್ಲೂ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಂಡಿಸಿದರು. ಆನಂತರ ಮಾತನಾಡಿದ ಸಚಿವ ರಿಜಿಜು ಈ ಮಸೂದೆಯು ಮುಸ್ಲಿಮರ ವಿರುದ್ಧವಾಗಿಲ್ಲ. ಅವರ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ. ಇದು ವಕ್ಫ್ ಆಸ್ತಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು, ಸಮಸ್ಯೆಗಳನ್ನು ಪರಿಹರಿಸಲು, ಪಾರದರ್ಶಕತೆಯನ್ನು ಕಾಪಾಡಲು, ತಂತ್ರಜ್ಞಾನ-ಚಾಲಿತ ನಿರ್ವಹಣೆಯನ್ನು ಉದ್ದೇಶದಿಂದ ಪರಿಚಯಿಸಲಾಗಿದೆ ಎಂದು ಹೇಳಿದರು.ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪರಿಶೀಲಿಸಿ ಪುನರ್ ರಚಿಸಿದ ಮಸೂದೆಯನ್ನು ಮೇಲ್ಮನೆಯಲ್ಲಿ ಮಂಡಿಸಿದ ಸಚಿವರು, ಈ ಮಸೂದೆ ಕೇವಲ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ ಎಂದು ಅವರು, 2004 ರಲ್ಲಿ 4.9 ಲಕ್ಷ ಇದ್ದ ವಕ್ಫ್ ಆಸ್ತಿಗಳ ಸಂಖ್ಯೆ ಇದೀಗ ಅವು 8.72 ಲಕ್ಷಕ್ಕೆ ಏರಿದೆ ಎಂದು ಮಾಹಿತಿ ನೀಡಿದ ಅವರು, ಮಸೂದೆ ಅಂಗೀಕರಿಸಲು ವಿರೋಧ ಪಕ್ಷದ ಬೆಂಬಲ ಕೋರಿದರು.


Related Articles

Leave a Reply

Your email address will not be published. Required fields are marked *

Back to top button