ಇತ್ತೀಚಿನ ಸುದ್ದಿಕ್ರೈಂರಾಜ್ಯಸುದ್ದಿ
ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ಚಿತ್ರಗಳು
ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.
2021ರ ಆಗಸ್ಟ್ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ದಾಳಿ ಮಾಡಿದ್ದರು.
ಸಂಜೆಯ ತನಕ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನ 5 ಪ್ರದೇಶಗಳಲ್ಲಿ 40ಕ್ಕೂ ಅಧಿಕ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.